Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್, ಪಹಣಿ ತಿದ್ದುಪಡಿಗೆ ವಿಶೇಷ ಅಭಿಯಾನ- ಡಿ.ಸಿ. ವೆಂಕಟೇಶ್

Advertisement
 
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಬರುವ ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಪಹಣಿಯಲ್ಲಿನ ಸಣ್ಣಪುಟ್ಟ ತಿದ್ದುಪಡಿಗಳನ್ನು ಮಾಡಿಕೊಡಲು ವಿಶೇಷ ಅಭಿಯಾನ ಆರಂಭಿಸಲಾಗುವುದು, ರೈತರು ಕೂಡಲೆ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಹಸಿಲ್ದಾರರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.

      ಪಹಣಿ, ಆರ್‍ಟಿಸಿ ಯಲ್ಲಿನ ಲೋಪದೋಷಗಳ ತಿದ್ದುಪಡಿ ಅಧಿಕಾರವನ್ನು ಈ ಮೊದಲು ತಹಸಿಲ್ದಾರರಿಗೆ ನೀಡಲಾಗಿತ್ತು.  ಆದರೆ ಇದೀಗ, ಈ ಅಧಿಕಾರವನ್ನು ಉಪವಿಭಾಗಾಧಿಕಾರಿಗಳಿಗೆ ವಹಿಸಲಾಗಿರುತ್ತದೆ.  ಆರ್‍ಟಿಸಿ ಯಲ್ಲಿನ ಸಣ್ಣಪುಟ್ಟ ದೋಷಗಳಿಂದ ರೈತರಿಗೆ ಹಲವು ವಿಧದ ತೊಂದರೆಯಾಗುತ್ತಿದೆ, ಇದನ್ನು ಪರಿಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ರೈತ ಮುಖಂಡರುಗಳು ಜಿಲ್ಲಾಡಳಿತದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರೈತರಿಗೆ ಅನುಕೂಲವಾಗುವಂತಾಗಲು ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಅಭಿಯಾನವನ್ನು ಕೈಗೊಳ್ಳಲಾಗುವುದು.  

ಪಹಣಿಯಲ್ಲಿನ ಸಣ್ಣ ಪುಟ್ಟ ದೋಷಗಳನ್ನು ತಿದ್ದುಪಡಿ ಮಾಡಲು (ಅಪೀಲು ಪ್ರಕರಣಗಳನ್ನು ಹೊರತುಪಡಿಸಿ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾ ತಹಸಿಲ್ದಾರರಿಗೆ ಸಲ್ಲಿಸಬೇಕು.  ತಹಸಿಲ್ದಾರರು ಇಂತಹ ಅರ್ಜಿಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ, ಅರ್ಹ ಅರ್ಜಿಗಳ ಪಟ್ಟಿ ಮಾಡಿಕೊಂಡು, ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದಲ್ಲಿ, ಉಪವಿಭಾಗಾಧಿಕಾರಿಗಳು, ಅರ್ಹ ಅರ್ಜಿಗಳಿಗೆ ಸಂಬಂಧಿಸಿದ ಆರ್‍ಟಿಸಿ ತಿದ್ದುಪಡಿಗೆ ಅನುಮೋದನೆ ನೀಡುವರು.  

     ರೈತರು ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ