Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ವಿಶೇಷ ಅನುದಾನ: ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋನಿಗರಹಳ್ಳಿ ಮತ್ತು ದೊಡ್ಡಬೀರನಹಳ್ಳಿ ಈ ಹಿಂದೆ ನಡೆದ ಸವರ್ಣಿಯರ ದೌರ್ಜನ್ಯದಲ್ಲಿ ಹಾನಿಗೆಗೊಳಗಾದ ಅಲ್ಲಿನ ದಲಿತ ಕುಟುಂಬಗಳು ಹಾಗೂ ಅವರ ಆಶ್ರಿತ ಕುಟುಂಬಗಳಿಗೆ ಸರ್ಕಾರದಿಂದ ಸೌಲಭ್ಯ ಹಾಗೂ ಹೆಚ್ಚಿನ ಅನುದಾನ ನೀಡಿ


ದಲಿತರ ಕಲ್ಯಾಣಕ್ಕಾಗಿ ತಾಲ್ಲೂಕು ಆಡಳಿತ ಸ್ಪಂದಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಧರಣಿನಿರತ ಶೋಷಿತ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು.


ಕಾರ್ಯಕ್ರಮದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿ ಸಂದರ್ಭದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು, ಸಮಸ್ಯೆಗಳ ಬಗ್ಗೆ ಆಲಿಸಿ ಮನವಿಯನ್ನು ಪಡೆದರು.


ಇದೇ ಸಂದರ್ಭದಲ್ಲಿ ತಹಶೀಲ್ಧಾರ್ ರೇಹಾನ್ಪಾಷ ಹಾಗೂ ಉಪವಿಭಾಗಾಧಿಕಾರಿ ಮೊಹಬೂಬ್ಜಿಲಾನಿಯವರೊಂದಿಗೆ ಚರ್ಚೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ

ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ನಿಮ್ಮ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿಂದೆಯೂ ಸಹ ಜಿಲ್ಲಾಡಳಿತ ದೌರ್ಜನ್ಯಕ್ಕೀಡಾದ ದಲಿತ ಕುಟುಂಬಗಳಿಗೆ ಕೆಲವೊಂದು ಸೌಲಭ್ಯ ನೀಡಿದ ಬಗ್ಗೆ ಪ್ರಸ್ತಾಪಿಸಿದ ಶಾಸಕರು ಈ ಬಗ್ಗೆ ಪ್ರತ್ಯೇಕವಾಗಿವಾಗಿಯೇ ಸರ್ಕಾರದೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

ಧರಣಿ ನಿರತದಲಿತ ಮುಖಂಡ ಶಾಸಕರೊಂದಿಗೆ ಮಾತನಾಡಿ, ಘಟನೆ ನಡೆದು 10 ವರ್ಷಗಳೇ ಕಳೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ, ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳ ಸಮಸ್ಯೆಗಳನ್ನು ಆಲಿಸುವವರುಯಾರೂ ಇಲ್ಲ. ಒಟ್ಟಿನಲ್ಲಿ ಆ ಭಾಗದ ದಲಿತ ಕುಟುಂಬಗಳು ಸದಾಕಾಲ ನೋವಿನಿಂದಲೇ ಬದುಕುವ ಸ್ಥಿತಿಉಂಟಾಗಿದೆ ಎಂದು ನೊಂದು ನುಡಿದರು.

ಈ ಸಂದರ್ಭದಲ್ಲಿ ತಹಶೀಲ್ಧಾರ್‌ ರೇಹಾನ್ ಪಾಷಾ, ಇಒ ಎಸ್‌.ಶಶಿಧರ, ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳೀಧರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ, ರಮೇಶಗೌಡ, ಜಿ.ಟಿ.ಶಶಿಧರ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಎ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೇವ್ಲಾನಾಯ್ಕ್, ನಾಮ ನಿರ್ದೇಶನ ಸದಸ್ಯರಾದ ವೀರಭದ್ರ, ಬಡಗಿ ಪಾಪಣ್ಣ, ಸೈಯದ್‌ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ