Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಸಚಿವ ಮುನಿಯಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ / ಬೆಂಗಳೂರು:
ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮವಹಿಸಿ ಎಫ್ಐಆರ್ ದಾಖಲಿಸಲಾಗುವುದು ಸಂಬಂಧ ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರಿ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ ಟಿ.., ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ ಸಚಿವರು,

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023 ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ ಎಂದು ತಿಳಿಸಿದರು.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಈಗಾಗಲೇ ಅಗತ್ಯ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು,

ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್..ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ.

ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು. ಜಿಎಸ್ಟಿ ಅಥವಾ ಸಿಎಸ್ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಕಾರಣದಿಂದಾಗಿ ಎಬ್..ಸಿ ಯಿಂದ ಕೆ.ಎಸ್.ಡಿ.ಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಕಾರ್ಯ ಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಸಚಿವರು ಸದನದಲ್ಲಿ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ