Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನೂತನ ಸಿಎಂ ಡಿಕೆಶಿಗೆ ಶುಭವಾಗಲೆಂದು ಹಂಪಿ ವಿರುಪಾಕ್ಷೇಶ್ವರ ಸ್ವಾಮಿಗೆ ವಿಶೇಷ ಪೂಜೆ

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಾಗೂ ಹೊಸಪೇಟೆ ನಗರಸಭೆ ಸದಸ್ಯರು ಮತ್ತು ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ವಿಶ್ವಖ್ಯಾತ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಗೆ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಶುಭವಾಗಲೆಂದು  ಅಭಿಷೇಕ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡ ಭರತ್ ಕುಮಾರ್ ಸಿಆರ್ ಮಾತನಾಡಿ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ 5 ಯೋಜನೆಗಳನ್ನ ಕೊಡ ಜನರಿಗೆ ನೀಡುವುದರ ಮೂಲಕ ಅನೇಕ ಅಭಿವೃದ್ಧಿ ಯಶಸ್ಸನ್ನು ಕಟ್ಟಿದ್ದಾರೆ.

Advertisement

 ಅದೇ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಉತ್ತಮವಾದ ಆಡಳಿತ ನೀಡುವುದರ ಮೂಲಕ ಮತ್ತು ಹೆಚ್ಚಿನ ಯೋಜನೆಗಳನ್ನು ಈ ರಾಜ್ಯದ ಬಡವರ, ರೈತರ, ಕಾರ್ಮಿಕರ ಹಾಗೂ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗದವರ, ಅಲ್ಪಸಂಖ್ಯಾತರ ಎಲ್ಲರಿಗೂ ಕೂಡ ಉತ್ತಮವಾದ ಯೋಜನೆಗಳನ್ನು ನೀಡುವುದರ ಮೂಲಕ ಸುಭದ್ರವಾದ ಸರ್ಕಾರವನ್ನು ನಡೆಸಲು ಹಂಪಿ ವಿರೂಪಾಕ್ಷೇಶ್ವರ ಶಕ್ತಿಯನ್ನು ನೀಡಲಿ, ಇಂದಿನ ಸರ್ಕಾರ ಮತ್ತು ಮುಂಬರುವ ಸರ್ಕಾರದಲ್ಲಿ ಕೂಡ ಡಿಕೆಶಿ ಕುಮಾರ್ ಅವರು ಅಧಿಕಾರದಲ್ಲಿ ಇರಲಿ ಎಂದು ಮಾತನಾಡಿದರು.

ದಾದಾ ಕಲಂದರ್ ಅವರ ಮಾತಾಡಿ ರಾಜ್ಯದಲ್ಲಿ ಉತ್ತಮವಾದ ಮಳೆ ಬೆಳೆ ಸಮೃದ್ಧಿ ಆಗಲಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ಅಧಿಕಾರದಲ್ಲಿರಲಿ ಡಿಕೆ ಶಿವಕುಮಾರ್ ಅವರು ನಿರಂತರ ಮುಖ್ಯಮಂತ್ರಿಗಳಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಮಂಜುನಾಥ್, ದಾದಾ ಕಲಂದರ್, ವೆಂಕಟೇಶ್,ಹುಲುಗಪ್ಪ, ಗೌಸ್, ಶೇಖರ್, ಯುವ ಮುಖಂಡರಾದ ರಾಜು ಗುಜ್ಜಲ್ ಮಹಮ್ಮದ್ ಸುಹೇಲ್ ಆಕಾಶ್ ನವೀನ್ ಕುಮಾರ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆ ಶಿವಕುಮಾರ್ ಅಭಿಮಾನಿಗಳು ಇತರರು ಇದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು