Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೀಪಾವಳಿ ಹಬ್ಬದ ಪ್ರಯುಕ್ತ 2000 ಬಸ್ ಗಳೊಂದಿಗೆ ವಿಶೇಷ ಸಾರಿಗೆ ವ್ಯವಸ್ಥೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನರಕ ಚತುರ್ದಶಿ ಅಕ್ಟೋಬರ್ 31, ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್ 02 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30 ರಿಂದ ನವೆಂಬರ್ 01 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 03 ಮತ್ತು 04 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ  ರಸ್ತೆ ಸಾರಿಗೆ ನಿಗಮದ  ಮುಖ್ಯ ಸಂಚಾರ ವ್ಯವಸ್ಥಾಪಕರು ಅವರು ತಿಳಿಸಿದ್ದಾರೆ.

ಈ ಸ್ಥಳಗಳಿಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುವುದು.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

 ಪ್ರಯಾಣಿಕರು ಇ-ಟಿಕೇಟ್ ಬುಕಿಂಗ್‍ನ್ನು  www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ  ರಸ್ತೆ ಸಾರಿಗೆ ನಿಗಮದ  ಮುಖ್ಯ ಸಂಚಾರ ವ್ಯವಸ್ಥಾಪಕರು ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ