Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ

ಚಂದ್ರವಳ್ಳಿ ನ್ಯೂಸ್, ಬೀದರ್:
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು.  ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.

ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ ಎಂದರು.

ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕುಎಂದರು.

ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.



ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ ಎಂದರು.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್  ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ,  ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

ಉಚಿತ ಬಸ್ ಪಾಸ್: ನಿಯಮಗಳ ತೊಂದರೆ ನಿವಾರಣೆ: ಸಿಎಂ
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ