Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅನುದಾನ ಖರ್ಚು ಮಾಡಿ ಪ್ರಗತಿ ಸಾದಿಸಿ-ಡಾ. ಜಾಫರ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ 100 ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಿ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಪಿ.ಸಿ ಜಾಫರ್ ಅವರು ಹೇಳಿದರು.

      ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

       ಇಲಾಖೆಗಳಿಗೆ ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಬೇಕು. ಮಾರ್ಚ್ ಅಂತ್ಯದವರೆಗೆ ಕಾಯದೆ  ತ್ವರಿತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಡಿಸೆಂಬರ್ ಅಂತ್ಯ ಅಥವಾ ಜನವರಿ ಮಾಹೆಯೊಳಗೆ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನರೇಗಾ ಯೋಜನೆಯ ಸದ್ಬಳಕೆ ಆಗಬೇಕು- ನರೇಗಾ ಯೋಜನೆಯಡಿ ಹಲವು ಇಲಾಖೆಗಳಿಗೆ ಅನುದಾನ ಬಿಡುಗಡೆ ಆಗುತ್ತದೆ. ಅನುದಾನ ಸದ್ಬಳಕೆಯಾಗಬೇಕು. ಅರಣ್ಯ ಇಲಾಖೆಯಲ್ಲಿ ನರೇಗಾ ಯೋಜನೆಯಡಿ ಗಿಡ ನೆಡುವ ಅರಣ್ಯೀಕರಣ ಕಾರ್ಯಕ್ರಮ ಒಂದು ಉತ್ತಮ ಯೋಜನೆಯಾಗಿದೆ.

ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಿಭಾಗವು ಹೆಚ್ಚು ಹೆಚ್ಚು ಸಸಿಗಳನ್ನು ನಾಟಿ ಮಾಡಿ ಬೇಡಿಕೆ ಅನುಗುಣವಾಗಿ ರೈತರಿಗೆ, ಸಾರ್ವಜನಿಕರಿಗೆ ಹಂಚಬೇಕು. ಹಾಗೆಯೇ ವಿವಿಧ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರ್ಕಾರಿ ಜಾಗಗಳಲ್ಲಿ, ಬೆಟ್ಟಗುಡ್ಡಗಳಲ್ಲಿ, ಪ್ರವಾಸಿ ತಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಹೆಚ್ಚೆಚ್ಚು ಸಸಿಗಳನ್ನು ನೆಡಬೇಕು. ನೆಟ್ಟ ನಂತರ ಸಸಿಗಳನ್ನು ಪೋಷಿಸಿ ಬೆಳೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಪ್ರಸ್ತುತ ಈಗಿರುವ ವಾತಾವರಣ ಪರಿಸ್ಥಿತಿಯಲ್ಲಿ ಹವಾಮಾನ ವೈಪರೀತ್ಯ, ಪರಿಸರ ಸಂರಕ್ಷಣೆ, ಪ್ರಕೃತಿ ಸಮತೋಲನ ಕಾಪಾಡಲು ಗಿಡ ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಉಸ್ತುವಾರಿ ಕಾರ್ಯದರ್ಶಿಗಳು ಅಭಿಪ್ರಾಯ ಪಟ್ಟರು.

      2024 ನರೇಗಾ ಯೋಜನೆಯಡಿ 5720 ಸಸಿಗಳನ್ನು ನೆಟ್ಟು, 26 ಕಿಮೀ ರಸ್ತೆ ಬದಿ ನೆಡುತೋಪು ನಿರ್ಮಾಣ ಮಾಡಲಾಗಿದೆ. 44.16 ಹೆಕ್ಟೇರ್ ಬ್ಲಾಕ್ ಪ್ಲಾಂಟೇಶನ್ ನೆಡುತೋಪು ನಿರ್ಮಾಣ ಮಾಡಲಾಗಿದೆ. 2025 ವೇಳೆಗೆ 42840 ಸಸಿ ನೆಡುವುದು, ಸಾರ್ವಜನಿಕರ ವಿತರಣೆಗಾಗಿ 1,28,660 ಸಸಿಗಳನ್ನು ತಾಲ್ಲೂಕು ನರ್ಸರಿಗಳಲ್ಲಿ ಬೆಳೆಸಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದರು.

ವಲಸಿಗರ ಮೇಲೆ ನಿಗಾ ವಹಿಸಿ-
ಜಿಲ್ಲೆಗೆ
ಬೇರೆ ಪ್ರದೇಶದಿಂದ, ಬೇರೆ ರಾಜ್ಯದಿಂದ ಅಥವಾ ಬೇರೆ ರಾಷ್ಟ್ರಗಳಿಂದ ಉದ್ಯೋಗಕ್ಕೆ ಅಥವಾ ಇನ್ನಿತರ ಕಾರ್ಯ ಚಟುವಟಿಕೆಗಳಿಗೆ ಆಗಮಿಸುವ ವಲಸಿಗರ ಬಗ್ಗೆ ನಿಗಾ ವಹಿಸಿ. ಜಿಲ್ಲೆಯ ಯಾವ ಪ್ರದೇಶಗಳಲ್ಲಿ ವಲಸಿಗರು ವಾಸವಾಗಿದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಿ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆ, ಆರ್ಥಿಕ ಸ್ಥಿತಿಗತಿ, ಆರೋಗ್ಯ, ಶಿಕ್ಷಣ ಇವುಗಳ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಗ್ಯ, ಕಾರ್ಮಿಕ, ಪೋಲಿಸ್ ಇಲಾಖೆಗೆ ಸೂಚಿಸಿದರು.   

ಕಡಿಮೆ ಮಳೆ-
ಪ್ರಸ್ತುತ
ಸಾಲಿನಲ್ಲಿ ಜನವರಿ 01 ರಿಂದ ಸೆಪ್ಟೆಂಬರ್ 25 ವರೆಗೆ 557 ಮಿ.ಮೀ ವಾಡಿಕೆ ಮಳೆಗೆ 535 ಮಿ.ಮೀ ಮಳೆಯಾಗಿದೆ. ಕಳೆದ ಏಳು ದಿನಗಳಲ್ಲಿ ಅಂದರೆ ಸೆಪ್ಟೆಂಬರ್ 19 ರಿಂದ 25 ರವರೆಗೆ 47.01 ಮಿ.ಮೀ ವಾಡಿಕೆ ಮಳೆಗೆ 23.04 ಮಿ.ಮೀ ಮಳೆಯಾಗಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. 

    ಎಸ್.ಎಸ್.ಎಲ್.ಸಿ, ಪಿಯುಸಿ ಯಲ್ಲಿ ವರ್ಷ ಉತ್ತಮ ಫಲಿತಾಂಶ ಬರಲು ಯೋಜನೆ ರೂಪಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡಿ. ಶಾಲಾ ಕಾಲೇಜು ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರಾಗಿ, ಪ್ರಾಂಶುಪಾಲರಿಗೆ ಸೂಕ್ತ ತರಬೇತಿ, ಮಾರ್ಗಸೂಚಿಗಳನ್ನು ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್, ಪ್ರಾದೇಶಿಕ ಅರಣ್ಯ ವಿಭಾಗದ ಉಪವಿಭಾಗಾಧಿಕಾರಿ ಸರೀನಾ ಸಿಕ್ಕಲಿಗಾರ್, ಉಪವಿಭಾಗಾಧಿಕಾರಿ ಎನ್. ದುರ್ಗಶ್ರೀ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ