Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಆಂಜನೇಯ ಸ್ವಾಮಿನಿಷ್ಠೆ ಅಸಾಧಾರಣವಾದದ್ದು: ಎಚ್ ಲಕ್ಷ್ಮೀದೇವಮ್ಮ

Advertisement
 ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಆಂಜನೇಯಸ್ವಾಮಿಯು ಶ್ರೀರಾಮನ ಮೇಲಿಟ್ಟಿದ್ದ ಶುದ್ಧಭಕ್ತಿ
, ನಿಷ್ಕಾಮ ಸೇವೆ,ಸ್ವಾಮಿನಿಷ್ಠೆ , ಪೂರ್ಣ ಶರಣಾಗತಿ ಭಾವದ ಘಟನೆಗಳು ಅತ್ಯಂತ ಸ್ಮರಣೀಯವಾದವು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥೆ ಎಚ್ ಲಕ್ಷ್ಮೀದೇವಮ್ಮ ಅಭಿಪ್ರಾಯಪಟ್ಟರು.


ನಗರದ ಗಾಂಧಿನಗರದ ಸದ್ಭಕ್ತರಾದ ಅಂಬಿಕಾ ಪರಮೇಶ್ವರ್ ಅವರ ನಿವಾಸದಲ್ಲಿ "ಶ್ರೀಹನುಮ ಜಯಂತಿ"ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅವರು "ಶ್ರೀಆಂಜನೇಯಸ್ವಾಮಿ"ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. 

 ಶ್ರೀರಾಮಚಂದ್ರ ಮತ್ತು ಸೀತಾಮಾತೆ ಆಂಜನೇಯನಿಗೆ ನೀಡುತ್ತಿದ್ದ ಪ್ರಾಮುಖ್ಯತೆ ಬಹಳ ವಿಶೇಷವಾದದ್ದು ಹನುಮಂತನ ರೋಮರೋಮಗಳಲ್ಲಿ ಶ್ರೀರಾಮ ನಾಮದ ಸ್ಮರಣೆಯೇ ತುಂಬಿತ್ತು. ರಾಮ ಎಂಬುವ ಎರಡಕ್ಷರದ ಮಹಿಮೆ ಅನಂತವಾದದ್ದು ಎಂದರು.


ಸತ್ಸಂಗದ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ವಾಸವಿ ವನಿತಾ ಸಂಘದ ಸಂಧ್ಯಾ ವೆಂಕಟಾಚಲಂ, ವಾಸವಿ ಸತ್ಯನಾರಾಯಣ, ಶ್ರೀರಾಧಾ ಮಾಧವ ಭಜನಾ ಮಂಡಳಿಯ ಪರಿಮಳಾ ನಾಗರಾಜ್, ಕದಳಿ ವಚನ ಮಂಡಳಿಯ ಗೀತಾ ಪ್ರಕಾಶ್, ಅಂಬಿಕಾ ಪರಮೇಶ್ವರ್, ವಿಶಾಲಮ್ಮ, ಸೌಮ್ಯ, ಶೃತಿ, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಎಂ ಗೀತಾ ನಾಗರಾಜ್ ಅವರಿಂದ ವಿಶೇಷ ಭಜನಾ ಕಾರ್ಯಕ್ರಮ, ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಅನ್ನಪ್ರಸಾದ ವಿನಿಯೋಗ ನಡೆಯಿತು.                                

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ