Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿಪಂಥ ಪ್ರಸಾರ ಮಾಡಿದ ಶ್ರೀಚೈತನ್ಯ ಮಹಾಪ್ರಭುಗಳು: ಲಕ್ಷ್ಮೀದೇವಮ್ಮ    

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಭಗವನ್ನಾಮ ಸಂಕೀರ್ತನೆಯ ಮೂಲಕ ಭಕ್ತಿಪಂಥವನ್ನು ಪ್ರಸಾರ ಮಾಡಿದ ಮಹಾನ್ ಸಂತ ಮಹಾತ್ಮ ಶ್ರೀಚೈತನ್ಯ ಮಹಾಪ್ರಭುಗಳು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥೆ ಹೆಚ್. ಲಕ್ಷ್ಮೀದೇವಮ್ಮ ಅಭಿಪ್ರಾಯಪಟ್ಟರು.


ನಗರದ ತ್ಯಾಗರಾಜನಗರದ  ಸದ್ಭಕ್ತೆ ನಂಜಮ್ಮ ಕೆಂಚಪ್ಪ ಶಿಕ್ಷಕಿ ಸವಿತಾ ನಿವಾಸದಲ್ಲಿ "ಶ್ರೀಚೈತನ್ಯ ಮಹಾಪ್ರಭುಗಳ ಜಯಂತ್ಯುತ್ಸವ"ದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು "ಶ್ರೀಚೈತನ್ಯ ಮಹಾಪ್ರಭುಗಳ" ಬಗ್ಗೆ ವಿಶೇಷ ಉಪನ್ಯಾಸ ನೀಡಿದರು‌.    

                  ಜಯಂತೋತ್ಸವದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ , ಶ್ರೀರಾಮಕೃಷ್ಣರ ನಾಮಸ್ಮರಣೆ, ಗೀತಾ ಪ್ರಕಾಶ್, ರತ್ನಮ್ಮ ಜಯಚಂದ್ರ , ತಿಪ್ಪಮ್ಮ ಉಮಾಶಂಕರ್ ಅವರಿಂದ ವಿಶೇಷ ಭಜನೆಗಳು, ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಜಯಂತೋತ್ಸವ ಕಾರ್ಯಕ್ರಮದಲ್ಲಿ ಎಂ ಲಕ್ಷ್ಮೀದೇವಮ್ಮ, ಸುವರ್ಣಮ್ಮ, ಸರ್ವಮಂಗಳಾ, ಪ್ರೇಮಾ, ಸುನೀತಾ ಅನುಸೂಯ ರಾಘವೇಂದ್ರ, ಟಿ.ಎಂ.ವಿಜಯಾಗುರು, ಗೀತಾ ಸುಂದರೇಶ್ ದೀಕ್ಷಿತ್, ರಾಧಮ್ಮ,ಸಹನಾ, ಸರಸ್ವತಿ ರಾಜು, ಸರಸ್ವತಿ ನಾಗರಾಜ್ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ