Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸನಾತನ ಧರ್ಮದ ಶ್ರೇಷ್ಠತೆ ಎತ್ತಿ ಹಿಡಿದ ಶ್ರೀ ವಿಶ್ವೇಶ್ವರ ತೀರ್ಥ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಶತಮಾನಗಳ ಭಾರತೀಯರ ಹೋರಾಟಕ್ಕೆ ವಿಶ್ವರೂಪ ತಂದುಕೊಟ್ಟವರುವಿಶ್ವೇಶ್ವರ ತೀರ್ಥ ಶ್ರೀಗಳು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಕರ್ನಾಟಕದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸನಾತನ ಧರ್ಮದ ಶ್ರೇಷ್ಠತೆಯನ್ನು ಎತ್ತಿ ಹಿಡಿದ ಪದ್ಮವಿಭೂಷಣ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳ ಸ್ಮರಣಾರ್ಥ ಬೆಂಗಳೂರಿನ ನೆಲಮಂಗಲದಲ್ಲಿ ನಿರ್ಮಿಸಲಾಗಿರುವ ಆಸ್ಪತ್ರೆಯ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಪೂಜ್ಯ ವಿಶ್ವ ಪ್ರಸನ್ನತೀರ್ಥ ಶ್ರೀಗಳು ಹಾಗೂ ದೇಶ ಕಂಡ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ನಂತರ ಅವರು ಜನ್ಮವೆತ್ತಿದ ನೆಲದಿಂದಲೇ ಮೇಲೆದ್ದು ಬಂದ ದಿಟ್ಟೆದೆಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರ ಸಮ್ಮುಖದಲ್ಲಿ ಭಾಗವಹಿಸಲಾಯಿತು.

ಸನಾತನ ಧರ್ಮಕ್ಕೆ ನೂರು ಕಂಟಕಗಳು ಎದುರಾಗಿದ್ದಾಗ ಅದನ್ನು ಸಾತ್ವಿಕತೆಯಿಂದ, ದಿಟ್ಟತನದಿಂದ ಎದುರಿಸಿ ನಿಂತ ಒಬ್ಬ ಮಹಾನ್ ತಪಸ್ವಿಯನ್ನು ಕರ್ನಾಟಕ ಕಂಡಿದ್ದರೆ ಅದು ಪೂಜ್ಯ ವಿಶ್ವೇಶ್ವರ ತೀರ್ಥರು ಮಾತ್ರ. ಪೂಜ್ಯ ವಿಶ್ವೇಶ್ವರ ತೀರ್ಥರ ಹೆಸರಿನಲ್ಲಿ ನಾಡಿನ ಮೂಲೆ ಮೂಲೆಯಲ್ಲಿ ವಿವಾಹ ಕಾರ್ಯಗಳು, ಅವರು ಕೊಟ್ಟ ಸಂದೇಶಗಳು, ಅವರ ಬದುಕಿದ ಪ್ರೀತಿ , ಧರ್ಮಕ್ಕಾಗಿ ಅವರು ಮಾಡಿದ ತ್ಯಾಗ, ಕೃಷ್ಣ - ರಾಮರ ಶ್ರೇಷ್ಠತೆಯನ್ನು ಸಾರುವುದಕ್ಕಾಗಿ ಅವರು ನಡೆಸಿದಂತ ತಪಸ್ವೀ ಜೀವನ ಇಂದಿನ ಅವರ ಹೆಸರಿನ ಸ್ಮಾರಕ ಆಸ್ಪತ್ರೆಯ ಸಮರ್ಪಣೆ ನಮಗೆಲ್ಲ ಪ್ರೇರಣೆ ಒದಗಿಸಿದೆ ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸಮಾಜದ ಗಣ್ಯರು, ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ