Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಆಯ್ಕೆ  :ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ನೂರಾರು ವರ್ಷಗಳಿಂದ ದೇಶದ ಶೋಷಿತ
, ಬಡವರು, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಅಲೆಮಾರಿಗಳು ಸೇರಿದಂತೆ ಎಲ್ಲಾ ಜನಾಂಗಗಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ಏಕೈಕ ರಾಷ್ಟ್ರೀಯಪಕ್ಷ ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ದೇಶದ ಸಾರ್ವಭೌಮತ್ವ, ಸಮಾನತೆಯನ್ನು ಎತ್ತಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಕಾಂಗ್ರೆಸ್ ಪಕ್ಷ ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಪಕ್ಷವನ್ನು ಜನಮಾನಸದೊಂದಿಗೆ ಗುರುತಿಸುವ ಪ್ರತಿಯೊಬ್ಬ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಜವಾಬ್ದಾರಿ ನೀಡುವ ಮೂಲಕ ಅವರ ಸೇವೆಗೆ ಮನ್ನಣೆ ನೀಡುತ್ತಾ ಬಂದಿದೆ. ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಲವಾರು ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಂಕಲ್ಪಮಾಡಿ ಶ್ರಮಿಸಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ಟಿ.ಶ್ರೀನಿವಾಸ್‌ರವರನ್ನು ಗುರುತಿಸಿ ರಾಜ್ಯಮಟ್ಟದ ಜವಾಬ್ದಾರಿಯನ್ನು ಪಕ್ಷ ಅವರಿಗೆ ನೀಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಅವರನ್ನು ನೇಮಿಸಿ ಆದೇಶಿಸಿದೆ. ಇಂದು ಪಕ್ಷದ ಆದೇಶ ಪ್ರತಿಯನ್ನು ಅವರಿಗೆ ನೀಡಿ ಅವರು ಇಂದಿನಿಂದಲೇ ಸ್ಥಾನದಲ್ಲಿ ಕಾರ್ಯನಿರ್ವಹಿಸುವಂತೆ ಎಲ್ಲರಪರವಾಗಿ ಮನವಿ ಮಾಡುತ್ತೇನೆಂದರು.

ಸಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ ಯಶಸ್ವಿಯಾಗಿದ್ಧಾರೆ. ವಿಶೇಷವಾಗಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಪರಿಶಿಷ್ಟಪಂಗಡದ ಕ್ಷೇತ್ರವಾಗಿದ್ದು, ಸಮುದಾಯವನ್ನು ಸಂಘಟಿಸುವಲ್ಲಿ ಜವಾಬ್ದಾರಿ ಅವರ ಮೇಲಿದ್ದು, ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸ ನನಗಿದೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸಿ.ಟಿ.ಶ್ರೀನಿವಾಸ್ ಶಾಸಕರಿಂದ ನೇಮಕದ ಆದೇಶ ಪ್ರತಿಪಡೆದು ನನಗೆ ಈ ಹೊಸ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಈಗಾಗಲೇ ಸುಮಾರು ೩೦ ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

ಶಾಸಕರು ಸಹ ಪಕ್ಷದ ಅಭಿವೃದ್ದಿಗೆ ಸಂಬಂಧಪಟ್ಟಂತೆ ಎಲ್ಲಾ ಹಂತದಲ್ಲೂ ಸಹಕಾರ ನೀಡುತ್ತಾ ಬಂದಿದ್ಧಾರೆ. ಅವರ ಮಾರ್ಗದರ್ಶನದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ದಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಜವಾಬ್ದಾರಿ ನೀಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ, ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ನಗರಸಭೆ ಮಾಜಿ ಸದಸ್ಯ ಎಂ.ಜೆ.ರಾಘವೇಂದ್ರ, ಕಾಂಗ್ರೆಸ್ ಮುಖಂಡ ಭರಮಣ್ಣ, ರುದ್ರಮುನಿ, ಸುಧಾಕರ ಮುಂತಾದವರು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ