LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ನಾನು ರಾಜ್ಯ ಸಚಿವ ಸಂಪುಟದಲ್ಲಿ ಸಚಿವನಾಗಿರುವುದನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ
, ಹೀಗಾಗಿ ನನ್ನ ವಿರುದ್ಧ ವಿನಾಕಾರಣ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಆರೋಪಿಸಿದ್ದಾರೆ.

ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪ, ದಲಿತ ರಾಜಕಾರಣ ಹಾಗೂ ಬಳ್ಳಾರಿಯ ಮೂಲಸೌಕರ್ಯ ಅಭಿವೃದ್ಧಿ ಕುರಿತು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.

ನ್ಯಾಯಾಲಯದಲ್ಲಿರುವ ಪ್ರಕರಣ: "ನನ್ನ ಮೇಲಿರುವುದು ಬರಿ ಆರೋಪ ಅಷ್ಟೇ, ನಾನು ಅಪರಾಧಿಯಲ್ಲ. ಈ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದ್ದು, ಕಾನೂನಾತ್ಮಕವಾಗಿ ನಮ್ಮ ವಾದ ಮಂಡಿಸಲಿದ್ದೇವೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರದಲ್ಲಿಯೂ ಹಲವು ನಾಯಕರ ವಿರುದ್ಧ ಪ್ರಕರಣಗಳಿವೆ, ಹಾಗೆಂದು ಎಲ್ಲರೂ ರಾಜೀನಾಮೆ ನೀಡುವುದಿಲ್ಲ. ಪ್ರತಿಪಕ್ಷಗಳ ಆರೋಪಕ್ಕೆ ಸದನದಲ್ಲೇ ಸೂಕ್ತ ಉತ್ತರ ನೀಡಲಾಗುವುದು," ಎಂದರು.

ದಲಿತ ಸಚಿವನೆಂದು ತುಳಿಯುವ ಯತ್ನ: ತಾವು ದಲಿತ ಕುಟುಂಬದಿಂದ ಬಂದಿದ್ದಕ್ಕೆ ಹೆಮ್ಮೆಪಡುತ್ತೇನೆ ಎಂದ ಸಚಿವರು, ಇದನ್ನು ಮುಂದಿಟ್ಟುಕೊಂಡು ತಮ್ಮನ್ನು ರಾಜಕೀಯವಾಗಿ ತುಳಿಯುವ ಯತ್ನ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣಕ್ಕೆ ಖಂಡನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆ ಸಂವಿಧಾನಕ್ಕೆ ಮಾಡಿದ ಅಪಮಾನ ಹಾಗೂ ನಾಚಿಕೆಗೇಡಿನ ಕೃತ್ಯ ಎಂದ ಸಚಿವರು, ಕೇಂದ್ರ ಸರ್ಕಾರ ಜಾತಿ ತಾರತಮ್ಯಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಬಳ್ಳಾರಿ ಜೀನ್ಸ್ ಪಾರ್ಕ್‌ಗೆ 1,000 ಎಕರೆ ಭೂಮಿ ಅಗತ್ಯ:
ಬಳ್ಳಾರಿಯಲ್ಲಿ ಬೃಹತ್
ಜೀನ್ಸ್ ಪಾರ್ಕ್ಸ್ಥಾಪನೆಯ ಕುರಿತು ಮಾಹಿತಿ ನೀಡಿದ ಸಚಿವರು, ಈ ಯೋಜನೆಗೆ ಸುಮಾರು 1,000 ಎಕರೆ ಭೂಮಿಯ ಅಗತ್ಯವಿದೆ. ಪ್ರಸ್ತುತ ಮೆಂಚೇರಿ ಭಾಗದಲ್ಲಿ 666 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಜೀನ್ಸ್ ಉದ್ಯಮಕ್ಕೆ ಹೆಚ್ಚಿನ ನೀರು ಬೇಕಾಗುವುದರಿಂದ ಹಾಗೂ ಸ್ಥಳೀಯರಿಗೆ ಗರಿಷ್ಠ ಅನುಕೂಲ ಕಲ್ಪಿಸುವ ಉದ್ದೇಶದಿಂದ ಯೋಜನೆ ಕೊಂಚ ವಿಳಂಬವಾಗುತ್ತಿದೆ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯ ಈ ಯೋಜನೆ ಪೂರ್ಣಗೊಂಡರೆ ಬಳ್ಳಾರಿ ನಗರದಲ್ಲೇ ಸಾವಿರಾರು ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.

50 ತಿಂಗಳ ಅಭಿವೃದ್ಧಿ ಕಾರ್ಯ 20 ತಿಂಗಳಲ್ಲಿ ಪೂರ್ಣ:
ಬಳ್ಳಾರಿಯನ್ನು ಇಡೀ ದೇಶವೇ ತಿರುಗಿ ನೋಡುವ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ರಸ್ತೆ
, ಶಿಕ್ಷಣ ಹಾಗೂ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮುಂದಿನ 20 ತಿಂಗಳಲ್ಲಿ ಸುಮಾರು 50 ತಿಂಗಳಲ್ಲಿ ಆಗಬೇಕಾದಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳ ಉಳಿವಿಗೆ ಜಾಗೃತಿ ಅಗತ್ಯ: ಕೆಜಿ ಹನುಮಂತರಾಯ‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ‘ವಂದೇ ಮಾತರಂ’ ಗೀತೆ ಆಕ್ಷೇಪ ವಿವಾದ: ಬಿಜೆಪಿ ಆರೋಪಕ್ಕೆ ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಸ್ಪಷ್ಟನೆ!ಭದ್ರಾ ನೀರಿಗಾಗಿ ಆ.18ಕ್ಕೆ ಸಿಎಂ ಜೊತೆ ಸಭೆ: ರೈತರಿಂದ ಹೆದ್ದಾರಿ ತಡೆ ಹಿಂಪಡೆತ!ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ!‘RSS ನೋಂದಣಿಯೂ ಇಲ್ಲ, ಆಗೋದೂ ಇಲ್ಲ’: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು!ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್2047ರ ‘ವಿಕಸಿತ ಭಾರತ’ಕ್ಕಾಗಿ ದೊಡ್ಡ ಕನಸು ಕಾಣಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!80ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶಗಳಿವು!ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್‌ಫಾಲ್ ತೆರಿಗೆ ಕಡಿತಗೊಳಿಸಿದ ಕೇಂದ್ರ!