Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.26 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2-ಜಿಲ್ಲಾಧಿಕಾರಿ ವೆಂಕಟೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಸಂಬಂಧ ಜರುಗಿದ  ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಮಾರ್ಗದರ್ಶಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಸಂಗ್ರಹಿಸಿಡುವ ತಾಲೂಕು ಖಜಾನೆಗಳಲ್ಲಿ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆಯ ಪಾವಿತ್ರತೆ ಕಾಪಾಡಲು ವೆಬ್ ಕಾಸ್ಟಿಂಗ್ ಘಟಕ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

28 ಪರೀಕ್ಷಾ ಕೇಂದ್ರ 7902 ವಿದ್ಯಾರ್ಥಿಗಳು: ಇದೇ ಮೇ.26ರಿಂದ ಜೂನ್ 02 ರವರೆಗೆ  ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದೆ. ಮೇ.26ರಂದು ಪ್ರಥಮ ಭಾಷೆ, ಮೇ.27ರಂದು ಗಣಿತ, ಮೇ.28ರಂದು ಇಂಗ್ಲೀಷ್, ಮೇ.29ರಂದು ಸಮಾಜ ವಿಜ್ಞಾನ, ಮೇ.30ರಂದು ಹಿಂದಿ, ಮೇ.31ರಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

ಎಸ್ಎಸ್ಎಲ್ಸಿ ಪರೀಕ್ಷೆ-2ಗೆ 7902 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 28 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್ನರವನ್ನು ನೇಮಕ ಮಾಡಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತ, ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಬೇಕು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಶಿಕ್ಷಣಾಧಿಕಾರಿ ಸಿದ್ದಪ್ಪ, ಡಿವೈಎಸ್ಪಿ ದಿನಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ತಾಲ್ಲೂಕುಗಳ ಬಿ.., ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ