Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‍ಎಸ್‍ಎಲ್‍ಸಿ: ಶೇ.100ರಷ್ಟು ಫಲಿತಾಂಶಕ್ಕೆ ಶ್ರಮಿಸಿ- ಪ್ರಾಂಶುಪಾಲ ನಾಸಿರುದ್ದೀನ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಲಿಕೆಯಲ್ಲಿ ಹಿಂದುಳಿದ, ನಿಧಾನ ಕಲಿಕಾ ಮಕ್ಕಳಿಗೆ ಶಿಕ್ಷಕರು ಹೆಚ್ಚಿನ ಗಮನ ಹರಿಸುವ ಮೂಲಕ ಎಸ್‍ಎಸ್‍ಎಲ್‍ಸಿ ಫಲಿತಾಂಶ ಶೇ.100ರಷ್ಟು ತಲುಪಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೋಮವಾರ ಜಿಲ್ಲಾಮಟ್ಟದ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಮರುಸಿಂಚನ, ಜ್ಞಾನಸೇತು, ಮೌಲ್ಯಶಿಕ್ಷಣ ಮತ್ತು ಪೋಕ್ಸೋ ಕಾಯಿದೆಗಳ ಆರು ದಿನಗಳ ತರಬೇತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷಾ ನಿಯಮಾವಳಿ ಬದಲಾವಣೆಯಿಂದ ಈಗಾಗಲೇ ನೀಲನಕ್ಷೆ ಹಾಗೂ ನಾಲ್ಕು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆಯಿಂದ ಮಕ್ಕಳ ಉತ್ತೀರ್ಣಕ್ಕೆ ಸಹಾಯಕವಾಗಬಹುದು ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಒಂದು ತಿಂಗಳಿಂದ ಸುಮಾರು 580ಕ್ಕೂ ಹೆಚ್ಚು ಮರು ಸಿಂಚನ, ಜ್ಞಾನಸೇತು, ಪೋಕ್ಸೋ, ಮೌಲ್ಯಶಿಕ್ಷಣ, ವೃತ್ತಿ ಮಾರ್ಗದರ್ಶನ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ವೃತ್ತಿ ಮಾರ್ಗದರ್ಶನ ಅಗತ್ಯ ಹಾಗೂ ಉತ್ತಮ ಭವಿಷ್ಯ  ರೂಪಿಸಲು ಮೌಲ್ಯಶಿಕ್ಷಣ ಅಗತ್ಯವಾಗಿದ್ದು, ಪ್ರಸ್ತುತ ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದರಿಂದ ಸಮಾಜದಲ್ಲಿ ಕಳವಳಕಾರಿ ಸಂಗತಿ ಎಂದು ವಿಷಾಧಿಸಿದರು.

ಶಾಲಾ  ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಬರದನಾಡು ಚಿತ್ರದುರ್ಗ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯುತ್ತಿದ್ದು, ಎಲ್ಲ ವಿಷಯ ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷಾ ಭಯ ಹೋಗಲಾಡಿಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.

ತರಬೇತಿಯ ನೋಡಲ್ ಅಧಿಕಾರಿ ಜ್ಞಾನೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿಯು ಫಲಿತಾಂಶ ಸುಧಾರಣೆ ಸಹಾಯವಾಗಬೇಕು ಎಂದು ತರಬೇತಿಯ ರೂಪುರೇಷೆಗಳನ್ನು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ವಿಷಯದ ನಿಧಾನ ಕಲಿಕಾ ಮಕ್ಕಳಿಗೆ ಸಿದ್ದಪಡಿಸಿದ ಮಿಷನ್ 40+ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕರಾದ ಕೆ.ಜೆ.ಪ್ರಶಾಂತ, ನಿತ್ಯಾನಂದ, ಡಯಟ್ ಉಪನ್ಯಾಸಕರಾದ  ಎಸ್.ರವಿಬಸವರಾಜ್, ರೇವಣ್ಣ, ರಾಮಚಂದ್ರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಸಮಾಜ ವಿಜ್ಞಾನ ಶಿಕ್ಷಕರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ