Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಿಬ್ಬಂದಿಗಳು ಅಮಾನತು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಭಾಗವಹಿಸುತ್ತಿರುವ ಮಾಹಿತಿ ಇದ್ದು ಈ ಬಗ್ಗೆ ವರದಿ ಕೇಳಿದ್ದು, ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರು ಸಾರ್ವಜನಿಕರ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದೇವೆ. ಆದರೆ, ಅವರು ನಮಗಿಂತಲೂ ಹೆಚ್ಚು ರಾಜಕೀಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಚಿವರು ದೂರಿದರು.


ಸರ್ಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವುದಲ್ಲದೆ, ಬೇರೆ ರೀತಿಯಲ್ಲೂ ಪಾಲ್ಗೊಂಡಿದ್ದಾರೆ. ಇದರಲ್ಲಿ ನಮ್ಮ ಇಲಾಖೆಯ ಕೆಲವರಿದ್ದಾರೆ. ಈ ಸಂಬಂಧ ವರದಿ ತರಿಸಿಕೊಳ್ಳುತ್ತಿದ್ದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಖರ್ಗೆ ತಿಳಿಸಿದರು.‌

2013ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಸಬಾರದು ಎಂಬ ಸುತ್ತೋಲೆ ಹೊರಡಿಸಿದ್ದರು. ಹಲವು ಇಲಾಖೆಗಳು ಈ ಹಿಂದೆ ಈ ನಿಟ್ಟಿನಲ್ಲಿ ಆರ್ಡರ್ ಮಾಡಿವೆ. ಹಾಗಾಗಿ ಅವರು ಆರ್​​ಎಸ್ಎಸ್ ವಿರೋಧಿಗಳಾ?. ಇವತ್ತು ಹಲವು ಲೋಪಗಳಿವೆ, ಅದಕ್ಕಾಗಿಯೇ ಇವರೆಲ್ಲರೂ ಬೆಳೆದಿದ್ದಾರೆ.

ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಆರ್​ಎಸ್​ಎಸ್ ಬ್ಯಾನ್ ಮಾಡಲು ಸಾಧ್ಯವಾಗಿಲ್ಲ ಅಂತಾರೆ.‌ಹೌದು ಆವತ್ತು ನಿಷೇಧ ವಾಪಸ್ ಪಡೆದಿದ್ದು ಸರಿಯಲ್ಲ ಅಂತ ನಾವು ಹೇಳುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.‌
ಹಿಂದುತ್ವ ತಂದಿದ್ದು ಸಾವರ್ಕರ್ ತಾನೇ. ಮೊದಲು ಎಲ್ಲರೂ ಹಿಂದೂ ಅಂತಾನೇ ಇತ್ತು.


ಇವರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಿಂದುತ್ವ ತಂದರು. ಸಿದ್ದರಾಮಯ್ಯ ಅದನ್ನು ನಂಬದಿರಬಹುದು‌. ಆದರೆ ಡಿಸಿಎಂ ಬಹಳ ನಂಬುತ್ತಾರೆ‌. ಕೆಲವು ವಿಚಾರಗಳಲ್ಲಿ ನಾನು ನಂಬಲ್ಲ. ನಮ್ಮ ತಾಯಿ ನಂಬುತ್ತಾರೆ‌. ನನ್ನ ನಂಬಿಕೆ ಬೇರೆಯವರಿಗೆ ತೊಂದರೆ ಕೊಡಬಾರದು. ಸಂವಿಧಾನದ ಆಶಯಗಳಿಗೆ ಧಕ್ಕೆ ಬರಬಾರದು ಎಂದು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ