LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 21 ಅರ್ಜಿ ಸಲ್ಲಿಸಲು ಕೊನೆಯ ದಿನ.

  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 01ರಂದು ರಾಜ್ಯಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಈ ದಿನಾಚರಣೆ ಅಂಗವಾಗಿ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜಸೇವೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿರಿಯ ನಾಗರಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಒಂದು ಸಂಸ್ಥೆಗೆ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.

ಆಸಕ್ತರು ಜಿಲ್ಲಾ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಪ್ರಸ್ತಾಪನೆಗಳನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಆಗಸ್ಟ್ 21ರ ಒಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚಿತ್ರದುರ್ಗ' ಈ ಕಚೇರಿಗೆ ಸಲ್ಲಿಸಬೇಕಾಗಿದೆ. ತಡವಾಗಿ ಬಂದ ಪ್ರಸ್ತಾಪನೆಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಕ್ರೀಡಾಂಗಣದ ಹತ್ತಿರ, ಬುದ್ಧ ಸರ್ಕಲ್, ಚಿತ್ರದುರ್ಗ.

ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್