Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಪುರ ಶ್ರೀರಾಮ ಆತ್ಮ ಮಹಿಳಾ ಸ್ವ ಸಹಾಯ ಗುಂಪಿಗೆ ರಾಜ್ಯ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮ ಪಂಚಾಯಿತಿಯ ಝಾನ್ಸಿರಾಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯಿತಿ ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಗುಂಪಿಗೆ ಮಹಿಳಾ ಸಬಲೀಕರಣ ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿಯಲ್ಲಿ ತೋರಿದ ಶ್ರೇಷ್ಠ ಕಾರ್ಯಕ್ಕಾಗಿ ರಾಜ್ಯ ಮಟ್ಟದ ಉತ್ತಮ ಸ್ವ ಸಹಾಯ ಗುಂಪಿನ ಪ್ರಶಸ್ತಿ ಲಭಿಸಿದೆ.


  ಕೌಶಲಾಭಿವೃದ್ಧಿ ಉದ್ಯಮಿಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಈಚೆಗೆ ಬೆಂಗಳೂರಿನ ಲಲಿತ ಅಶೋಕ್ ಹೋಟೆಲ್‍ನಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾದ ಬೆಂಗಳೂರು ಕೌಶಲ್ಯ ಶೃಂಗಸಭೆ-2025ರಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಇತರೆ ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.


ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM&NULM)  ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ ಎಂಟು ಜಿಲ್ಲೆಗಳ ಸ್ವಸಹಾಯ ಗುಂಪುಗಳ ಸದಸ್ಯರನ್ನು ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ವಿವಿಧ ಅಂಗ ಸಂಸ್ಥೆಗಳ ಅತ್ಯುತ್ತಮ ಕಾರ್ಯಕ್ಕೆ ನೀಡಲಾಗುವ ಪ್ರಶಸ್ತಿಯಲ್ಲಿ ಸಂಘದ ಸದಸ್ಯರನ್ನು ಆಯ್ಕೆ ಮಾಡಿ,  ಸಂಘಗಳು ಮಹಿಳಾ ಸಬಲೀಕರಣ ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿಯಲ್ಲಿ ತೋರಿದ ಶ್ರೇಷ್ಠ ಕಾರ್ಯಕ್ಕಾಗಿ  ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಪ್ರಶಸ್ತಿ ಪಡೆದ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಅಭಿನಂದಿಸಿ, ಇನ್ನೂ ಹೆಚ್ಚು ಸಾಧನೆ ಮಾಡುವಂತೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಎನ್‍ಆರ್‍ಎಲ್‍ಎಂ ಜಿಲ್ಲಾ ಅಭಿಯಾನ ನಿರ್ವಾಹಣ ಘಟಕದ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ