Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅವಿವೇಕತನದ ಪರಮಾವಧಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರ ಸಭೆ" ಆಯೋಜಿಸಿ ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ಮಾಡಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರು, ಮಾಜಿ ಸಚಿವರು, ಶಾಸಕರು ಹಾಗೂ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿ ಜಾತಿ ಗಣತಿ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.

ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಥಮ ಬಾರಿಗೆ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಸೇರ್ಪಡೆಗೊಳಿಸಿ ಹಿಂದುಳಿದ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳ ಸಮೀಕ್ಷೆ ನಡೆಸಲು ಚಾರಿತ್ರಿಕ ಹೆಜ್ಜೆಯಿಟ್ಟಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿ ಹಾಗೂ ಜಾತಿಗಣತಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅವಿವೇಕತನದ ಪರಮಾವಧಿ ಹಾಗೂ ಜನರ ತೆರಿಗೆ ಹಣವನ್ನು ನೀರಿಗೆ ಚೆಲ್ಲುವ ಮತ್ತೊಂದು ಪ್ರಹಸನ ಎಂದು ವಿಜಯೇಂದ್ರ ಟೀಕಿಸಿದರು.  

ಈ ನಿಟ್ಟಿನಲ್ಲಿ ಹಿಂದುಳಿದ ಸಮಾಜಗಳು ಜಾಗೃತಗೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಕಾಂತರಾಜು ವರದಿಗೆ ತರ್ಪಣ ಬಿಟ್ಟು ಅದಕ್ಕೆ ಖರ್ಚಾದ 165 ಕೋಟಿ ರೂ ವೆಚ್ಚವನ್ನು ನಿರರ್ಥಕ ಗೊಳಿಸಿರುವುದರ ಕುರಿತು ಎಲ್ಲೆಡೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು ಎಂದು ಅಧ್ಯಕ್ಷರು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ಬಿ.ಎ ಬಸವರಾಜ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಪಿ.ಸಿ ಮೋಹನ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್‌ ಕುಮಾರ್‌, ಪಿ. ರಾಜೀವ್‌, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್.ರಘು ಕೌಟಿಲ್ಯ ಸೇರಿದಂತೆ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು