ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕøಷ್ಠತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ 2026-27ನೇ ಸಾಲಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕೈಮಗ್ಗ ನೇಕಾರರು ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು ಕನಿಷ್ಠ 30 ವರ್ಷ ಮೇಲ್ಪಟ್ಟವರು ಮತ್ತು ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತರು ಸೀರೆ/ಉಣ್ಣೆ ಕಂಬಳಿ ಉತ್ಪನ್ನದ ಮಾದರಿ ಬಣ್ಣದ ಛಾಯಾಚಿತ್ರ ಹಾಗೂ ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಇದೇ ಮೇ 30 ರೊಳಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಭಾಗ್ಯ ಕಾಂಪ್ಲೆಕ್ಸ್, ಬಿ.ಡಿ.ರಸ್ತೆ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-221426 ಗೆ ಕಚೇರಿಯ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.




