LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದ ಕಾರ್ತಿಕ್‌ಗೆ ರಾಜ್ಯಮಟ್ಟದ ಗೌರವ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಕ್ತದಾನದ ಮೂಲಕ ಅನೇಕ ಜೀವಗಳನ್ನು ಉಳಿಸಲು ಮಹತ್ವದ ಕೊಡುಗೆ ನೀಡಿರುವ ಚಿತ್ರದುರ್ಗದ ಎಂ. ಕಾರ್ತಿಕ್ ಅವರಿಗೆ ಬೆಂಗಳೂರಿನಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಗಿದೆ.

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬೆಂಗಳೂರಿನ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸೆಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ತಿಕ್ ಅವರನ್ನು ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು. ಪ್ರತಿವರ್ಷ ರಾಜ್ಯದಲ್ಲಿ ಅತಿಹೆಚ್ಚು ಬಾರಿ ರಕ್ತದಾನ ಮಾಡಿದ 10 ಮಂದಿಯನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಚಿತ್ರದುರ್ಗ ಜಿಲ್ಲೆಯಿಂದ ಕಾರ್ತಿಕ್ ಆಯ್ಕೆಯಾಗಿರುವುದು ವಿಶೇಷವಾಗಿದೆ.

48 ವರ್ಷದ ಕಾರ್ತಿಕ್ ಇದುವರೆಗೆ 70 ಬಾರಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ್ದು, ಸಾವಿರಾರು ಜನರ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೆ, 3000ಕ್ಕೂ ಹೆಚ್ಚು ಮಂದಿಗೆ ರಕ್ತ ಪೂರೈಕೆಯಾಗುವಂತೆ ಸಮನ್ವಯ ಸಾಧಿಸಿ ನೆರವಾಗಿರುವುದು ಅವರ ಸಾಮಾಜಿಕ ಸೇವೆಯ ಮತ್ತೊಂದು ಪ್ರಮುಖ ಸಾಧನೆಯಾಗಿದೆ. ಈ ಅಮೂಲ್ಯ ಸೇವೆಯನ್ನು ಗುರುತಿಸಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಿರ್ದೇಶಕ ರಜನೀಶ್ ಶರ್ಮ ಉದ್ಘಾಟಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್, ಎಂಇಜಿ ಕೇಂದ್ರದ ಕರ್ನಲ್ ಪ್ರೊಸೆಂಜಿತ್ ದೇವ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಉಪಾಧ್ಯಕ್ಷ ಭಾಸ್ಕರ ರಾವ್ (ನಿವೃತ್ತ ಐಪಿಎಸ್), ಬನ್ನೂರು ರಾಜೀವ್ ಶೆಟ್ಟಿ, ಶ್ರೀನಿವಾಸ ಎಸ್. ಹ್ಯಾಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ