Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ತುಮಕೂರಿನಲ್ಲಿ ನವೆಂಬರ್-24ಕ್ಕೆ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ತುಮಕೂರಿನಲ್ಲಿ ನವೆಂಬರ್ 24ರಂದು ನಡೆಸಲು ನಿರ್ಧರಿಸಲಾಗಿದೆ.


ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವರೂ ಆದ ಜಿ.ಪರಮೇಶ್ವರ ಅವರನ್ನು ತುಮಕೂರಿನಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ ನೇತೃತ್ವದ ನಿಯೋಗ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ.

ಕ್ರೀಡಾಕೂಟವನ್ನು ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಿದ್ದು, ಎಲ್ಲಾ ಜಿಲ್ಲೆಗಳಿಂದ ಸಾವಿರ ಪತ್ರಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ. ಭಾರತ ತಂಡದ ಮಾಜಿ ನಾಯಕ ರಾಹುಲ್ ಡ್ರಾವಿಡ್ ಮತ್ತು ಅನಿಲ್‌ಕುಂಬ್ಳೆ ಅವರನ್ನು ಉದ್ಘಾಟನೆಯ ವಿಶೇಷ ಅತಿಥಿಗಳಾಗಿ ಆಹ್ವಾನಿಸಲು ನಿರ್ಧರಿಸಲಾಯಿತು.

ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಮತ್ತು ಅಚ್ಚುಕಟ್ಟಾಗಿ ಆಚರಣೆ ಮಾಡಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ ಸಚಿವರು, ಈ ಬಗ್ಗೆ ಜಿಲ್ಲಾಡಳಿತದ ಸಹಕಾರವನ್ನೂ ನೀಡುವುದಾಗಿ ತಿಳಿಸಿದರು.

ಸಂಘದ ಮನವಿಗೆ ಪೂರಕವಾಗಿ ಸ್ಪಂದಿಸಿ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ ಅವರು ಪತ್ರಕರ್ತರಿಗೆ ಸಂಬಂಧಿಸಿದ ರಾಜ್ಯ ಮಟ್ಟದ ಎರಡು ಕಾರ್ಯಕ್ರಮಗಳು ನಮ್ಮ ಜಿಲ್ಲೆ ಆತಿಥ್ಯ ವಹಿಸುತ್ತಿರುವುದು ಸಂತಸದ ಸಂಗತಿ. ಹಿಂದೆ 2 ರಾಷ್ಟ್ರೀಯ ಸಮ್ಮೇಳನಗಳು ಅತ್ಯಂತ ವ್ಯವಸ್ಥಿತವಾಗಿ ಜಿಲ್ಲೆಯಲ್ಲಿ ನಡೆದಿವೆ. ಎಲ್ಲರೂ ಸೇರಿ ರಾಜ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸೋಣ. ಸಿಎಂ ಅವರನ್ನು ಆಹ್ವಾನಿಸೋಣ ಎಂದರು.

ತುಮಕೂರಿನ ಎಂ.ಜಿ. ಕ್ರೀಡಾಂಗಣವನ್ನು ಮಾದರಿಯಾಗಿ ನಿರ್ಮಿಸಲಾಗಿದೆ. ಇದನ್ನು ರಾಜ್ಯ, ರಾಷ್ಟದ ವಿವಿಧೆಡೆಯವರು ಬಂದು ವೀಕ್ಷಿಸಲು ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಪೂರಕವಾಗಲಿದೆ ಎಂದು ಭಾವಿಸುತ್ತೇನೆ. ನಿಮ್ಮೊಂದಿಗೆ ನಾವಿರುತ್ತೇವೆ ವ್ಯವಸ್ಥಿತವಾಗಿ ಸಂಘಟಿಸಿ ಎಂದು ಸಲಹೆ ನೀಡಿದರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಹಿಂದೆ 2012ರಲ್ಲಿ ರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಘಟಕದವರು ಉತ್ಸುಕತೆಯಿಂದ ರಾಜ್ಯಸಮ್ಮೇಳನ ಹಾಗೂ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಸಂಘಟಿಸಲು ಮುಂದಾಗಿದ್ದಾರೆ. ಇದಕ್ಕೆ ನಿಮ್ಮ ಸಹಕಾರ ಅಗತ್ಯ ಎಂದು ಸಚಿವರನ್ನು ಕೋರಿದರು.

ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ತುಮಕೂರಿನಲ್ಲಿ ಸುಸಜ್ಜಿತವಾಗಿ ನಿರ್ಮಾಣವಾದ ಮಹಾತ್ಮಗಾಂಧಿ ಕ್ರೀಡಾಂಗಣ ರಾಜ್ಯದವರೆಲ್ಲರಿಗೂ ಪರಿಚಯವಾಗಬೇಕೆಂಬ ನಿಟ್ಟಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಸ್ಟೇಡಿಯಂನಲ್ಲೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ತುಮಕೂರಿನ ಹೊರಭಾಗದಲ್ಲಿ ಕಾರ್ಯಕ್ರಮ ಮಾಡುವುದಕ್ಕಿಂತ ನಗರದೊಳಗೆ ಕಾರ್ಯಕ್ರಮ ಮಾಡುವುದು ಸೂಕ್ತ ಎಂದು ರಾಷ್ಟ್ರೀಯ ಮಂಡಳಿ ಸದಸ್ಯರಾದ ಟಿ.ಎನ್.ಮಧುಕರ್ ಮತ್ತು ಅನು ಶಾಂತರಾಜ್ ಸಲಹೆ ನೀಡಿದಾಗ ಸಚಿವರು ಅದನ್ನು ಒಪ್ಪಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶಸಂಘದ ರಾಜ್ಯ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಕಾರ್ಯದರ್ಶಿ ಸತೀಶ್ ಹಾರೋಗೆರೆ, ನಿರ್ದೇಶಕರಾದ ಪರಮೇಶ್, ಜಯಣ್ಣ ಜಯನುಡಿ, ಶಂಕರ್‌ಶಿರಾ, ಯಶಸ್ ಪದ್ಮನಾಭ್, ಕಾಗ್ಗೆರೆ ಸುರೇಶ್, ಕುಣಿಗಲ್ ರವೀಂದ್ರಕುಮಾರ್ ಮತ್ತಿತರರು ನಿಯೋಗದಲ್ಲಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿಬರ ಪರಿಹಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ. ವೈ. ವಿಜಯೇಂದ್ರ