Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಾವಣಗೆರೆಯಲ್ಲಿ ಇಂದು ರಾಜ್ಯಮಟ್ಟದ 'ವಿದ್ಯಾರತ್ನ' ಪ್ರಶಸ್ತಿ ಪ್ರದಾನ: 18 ಜನ ಶಿಕ್ಷಕರ ಆಯ್ಕೆ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ: 
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು ರಾಜ್ಯ ಘಟಕ) ವತಿಯಿಂದ ಸೆಪ್ಟೆಂಬರ್
20 ರಂದು ದಾವಣಗೆರೆ ನಗರದ ಎ.ವಿ.ಕೆ. ರಸ್ತೆಯ ಗುರುಭವನದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಷ್ಠಿತ 'ವಿದ್ಯಾರತ್ನ' ಪ್ರಶಸ್ತಿ ಪ್ರದಾನ ಸಮಾರಂಭ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

ಈ ಸಮಾರಂಭದಲ್ಲಿ ಬೆಂಗಳೂರು ವಿಭಾಗದಿಂದ ಒಟ್ಟು 18 ಜನ ಸಾಧಕ ಶಿಕ್ಷಕರು ಅಂತಿಮವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪರಿಷತ್ತಿನ ಬೆಂಗಳೂರು ವಿಭಾಗದ ಕಾರ್ಯಾಧ್ಯಕ್ಷರಾದ ಬನ್ನಿಹಟ್ಟಿ ಮಲ್ಲೇಶ್ ಅಧಿಕೃತವಾಗಿ ತಿಳಿಸಿದ್ದಾರೆ.

Advertisement

ಬೆಂಗಳೂರು ವಿಭಾಗದ 'ವಿದ್ಯಾರತ್ನ' ಪ್ರಶಸ್ತಿ ವಿಜೇತರು:
ಕೋಲಾರ: ಎಸ್.ಎನ್. ಕೋದಂಡರಾಮಯ್ಯ
, ಎನ್. ಮಂಜುಳ.
ಚಿತ್ರದುರ್ಗ: ಬಿ.ಜಿ. ಗೌರಮ್ಮ
, ರಾಜು.ಜೆ.
ಬೆಂಗಳೂರು ಗ್ರಾಮಾಂತರ: ಸುವರ್ಣಮ್ಮ
, ಸಿದ್ದಲಿಂಗಪ್ಪ.ಬಿ

ದಾವಣಗೆರೆ: ನಾಗವೇಣಿ.ಎಲ್, ಪ್ರಭು.ಬಿ
ಮಧುಗಿರಿ: ಮೋಹನ್.ಕೆ.ಜಿ
, ಜ್ಯೋತಿಲಕ್ಷ್ಮಿ.ವಿ
ಶಿವಮೊಗ್ಗ: ವಿದ್ಯಾವತಿ.ಆರ್.ಕೆ
, ಎಂ. ಮಹದೇವಪ್ಪ ತಾಳಗುಂದ
ಚಿಕ್ಕಬಳ್ಳಾಪುರ: ವಿ. ವೆಂಕಟೇಶ್
, ಪದ್ಮ.ಟಿ
ತುಮಕೂರು: ಶಿವಾನಂದ ಕೆ.ಪಿ
, ಶಶಿಕಲಾ.ಎನ್
ಬೆಂಗಳೂರು ದಕ್ಷಿಣ: ಸುಕನ್ಯ.ಎ
, ಕೆಂಪರಾಜು.ಡಿ

ಭಾನುವಾರ ಬೆಳಿಗ್ಗೆ 10:30ಕ್ಕೆ ನಡೆಯಲಿರುವ ಈ ಅರ್ಥಪೂರ್ಣ ಸಮಾರಂಭದಲ್ಲಿ ಪ್ರಮುಖ ಗಣ್ಯರಾದ ದಾವಣಗೆರೆ ಲೋಕಸಭಾ ಸದಸ್ಯರಾದ ಪ್ರಭಾ ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ದಕ್ಷಿಣ ವಲಯದ ಶಾಸಕ ಸಮರ್ಥ ಶಾಮನೂರು, ಸಮಾರಂಭದ ನೇತೃತ್ವವಹಿಸಿರುವ ರಾಜ್ಯ ಘಟಕದ ರಾಜ್ಯಾಧ್ಯಕ್ಷೆ ರಮಾ ಆರ್, ಪ್ರಧಾನ ಕಾರ್ಯದರ್ಶಿ ಪರ್ವೀನ್ ಬಾನು ಬುಳ್ಳನವರ, ಗೌರವಾಧ್ಯಕ್ಷ ಎಲ್.ಎ. ಲಕ್ಕಮ್ಮನವರ ಹಾಗೂ ಮಹಾಪೋಷಕ ಮಲ್ಲಿಕಾರ್ಜುನ ತೊದಲಬಾಗಿ ವೇದಿಕೆಯಲ್ಲಿರಲಿದ್ದಾರೆ.

ಇವರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳ ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವ ಈ ರಾಜ್ಯಮಟ್ಟದ ಕಾರ್ಯಕ್ರಮವು ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯದ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ನಾನೇ ಕ್ರೂರಿ, ನಾನೇ ಪ್ರೇಮಿ": ಆತ್ಮಾವಲೋಕನದ ಸಂದೇಶ ನೀಡಿದ ಡಾ.ಬಸವ ಕುಮಾರ ಸ್ವಾಮೀಜಿ ಭಾವನಾತ್ಮಕ ಮಾತುಗಳು!ಬುಡಬುಡಕಿ ಬಂದನಾರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಭಯಸಾರಿಗೆ ಡಿಪೋ ಹಾಗೂ ವಸತಿ ಗೃಹಗಳ ಉದ್ಘಾಟನೆಗೆ ಒತ್ತಾಯಿಸಿ ಸಚಿವ ರಘುಮೂರ್ತಿಯವರಿಗೆ ಮನವಿ ವಾಸವಿ ಕಾಲೋನಿಯ ಗಣೇಶ ಸನ್ನಿಧಿಯಲ್ಲಿ ಶ್ರೀಶಾರದಾಶ್ರಮದ ಭಕ್ತರಿಂದ ವಿಶೇಷ ಭಜನೆಹರಿಯಬ್ಬೆ ನಾಗಭೂಷಣ ಡಿ. ಅವರಿಗೆ 'ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್' ಗೌರವಬಯಲುಸೀಮೆಯ ಜೀವನಾಡಿ: ಚಿತ್ರದುರ್ಗ ಜಿಲ್ಲೆಗೆ ಹರಿದುಬಂದ ಭದ್ರೆ - ಸಂಭ್ರಮವೋ ಸಂಭ್ರಮ!ಗಂಗಾ ಕಲ್ಯಾಣ: 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ವಿತರಿಸಿದ ಸಚಿವ ಟಿ.ರಘುಮೂರ್ತಿದಾವಣಗೆರೆಯಲ್ಲಿ ಇಂದು ರಾಜ್ಯಮಟ್ಟದ 'ವಿದ್ಯಾರತ್ನ' ಪ್ರಶಸ್ತಿ ಪ್ರದಾನ: 18 ಜನ ಶಿಕ್ಷಕರ ಆಯ್ಕೆತಾಲೂಕಿನ ಹುಲಿಕುಂಟೆಯಲ್ಲಿ ಹೊಸ ಕೆಎಸ್‌ಆರ್‌ಟಿಸಿ ಉಪವಿಭಾಗ ಹಾಗೂ ಬಸ್ ಡಿಪೋ: ಸಚಿವ ಡಾ. ಜಿ. ಪರಮೇಶ್ವರ್