Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್​ಎಸ್​​ಎಸ್ ಪಥಸಂಚಲನ ನಿರ್ಬಂಧಿಸಿ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.


ರಾಜ್ಯ ಸರ್ಕಾರ ಪಥಸಂಚಲನ ನಿರ್ಬಂಧಿಸುವ ಸಂಬಂಧ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಿತ್ತು.


ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಇದರ ವಿಚಾರಣೆ ನಡೆಸಿ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಬಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ. ಆರ್​ಎಸ್​ಎಸ್ ಚಟುವಟಿಕೆ ನಿರ್ಬಂಧ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

ರಾಜ್ಯ ಸರ್ಕಾರ 2025ರ ಅ.18 ರಂದು ಹೊರಡಿಸಿದ್ದ ಆದೇಶವನ್ನು ಧಾರವಾಡದ ಪುನಶ್ಚೇತನ ಸೇವಾ ಸಂಸ್ಥೆ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್​ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ.

ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸರ್ಕಾರಿ ಆದೇಶ ಸಂವಿಧಾನ ನೀಡಿರುವ ಹಕ್ಕನ್ನು ಕಿತ್ತುಕೊಳ್ಳಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪುನಶ್ಚೇತನ ಸೇವಾ ಸಂಸ್ಥೆ ಎಂಬ ಸಂಘಟನೆ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.
ಸಂಸ್ಥೆಯ ವಾದವೇನು
?


ಸಂವಿಧಾನವು ನಾಗರಿಕರಿಗೆ ಆರ್ಟಿಕಲ್ 19 (1) ಎ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು ಆರ್ಟಿಕಲ್ 19 (1) ಬಿ (ಶಾಂತಿಯುತವಾಗಿ ಮತ್ತು ನಿರಾಯುಧರಾಗಿ ಸಭೆ ಸೇರುವ ಸ್ವಾತಂತ್ರ್ಯ) ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ಪುನಶ್ಚೇತನ ಸೇವಾ ಸಂಸ್ಥೆ ವಾದ ಮಂಡಿಸಿತ್ತು.

ಸರ್ಕಾರದ ಆದೇಶವು ಈ ಸಂವಿಧಾನದತ್ತ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನವಾಗಿದೆ ಮತ್ತು ಇದು ಒಂದು ಡ್ರಕೋನಿಯನ್ ಕಾಯ್ದೆಯಾಗಿದೆ. ಈಗಾಗಲೇ ಪೊಲೀಸ್ ಕಾಯ್ದೆಗಳು ಜಾರಿಯಲ್ಲಿರುವಾಗ, ಇಂತಹ ಹೊಸ ಆದೇಶದ ಮೂಲಕ ಮೂಲಭೂತ ಹಕ್ಕುಗಳಿಗೆ ಧಕ್ಕೆ ತಂದಿರುವುದು ಸರಿಯಲ್ಲ ಎಂದು ಅರ್ಜಿದಾರರು ಹೈಕೋರ್ಟ್‌ ಪೀಠಕ್ಕೆ ಮನವರಿಕೆ ಮಾಡಿದರು.

ಹೈಕೋರ್ಟ್ ಈ ವಾದಗಳನ್ನು ಗಂಭೀರವಾಗಿ ಪರಿಗಣಿಸಿತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳನ್ನು ಸರ್ಕಾರಿ ಆದೇಶದ ಮೂಲಕ ಕಿತ್ತುಕೊಳ್ಳುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ನೋಟಕ್ಕೆ ಸರ್ಕಾರದ ಈ ಆದೇಶ ಕಾನೂನು ಬಾಹಿರವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಅದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತು.

ಆರ್​ಎಸ್​ಎಸ್ ಪಥಸಂಚಲನದ ಭವಿಷ್ಯ ಏನು?
ಆರ್​ಎಸ್​ಎಸ್ ಚಟುವಟಿಕೆ ಸಂಬಂಧ ಪೊಲೀಸ್ ಕಾಯ್ದೆಯಡಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಲಬುರಗಿ ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್​ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು,

ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್-30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ. ಸರ್ಕಾರ ಸಲ್ಲಿರುವ ವರದಿ ಆಧಾರದಲ್ಲಿ ತೀರ್ಪು ನೀಡಬೇಕಿದೆ. ಆದರೆ, ಸರ್ಕಾರದ ಆದೇಶಕ್ಕೆ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಕಲಬುರಗಿ ಪೀಠದ ಆದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಅಲ್ಲಗಳಿಯುವಂತಿಲ್ಲ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ