Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಉಳಿಸಿ- ಜಿಬಿಐಟಿ ನಿಲ್ಲಿಸಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯಲ್ಲಿ ಮಾಡುತ್ತಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯುವಂತೆ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹತ್ತಿರ ರೈತರು ನಡೆಸುತ್ತಿರುವ ಹೋರಾಟ 200ನೇ ದಿನಕ್ಕೆ ಕಾಲಿಟ್ಟಿದ್ದು
, ಜೆಡಿಎಸ್ ಪಕ್ಷದ ವತಿಯಿಂದ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ವರ್ಚ್ಯುವಲ್ ಮೂಲಕ ಚಾಲನೆ ನೀಡಿ, ರೈತರನ್ನು ಉದ್ದೇಶಿಸಿ ಮಾತನಾಡಲಾಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ರೈತರ ಪಕ್ಷ. ಇದು ರೈತರ ಹೋರಾಟ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಯ ಸಾಧಕ- ಬಾಧಕಗಳ ಬಗ್ಗೆ ವಿಚಾರ ಮಾಡದೇ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಸಿದುಕೊಳ್ಳುತ್ತಿರುವುದು ಯಾವ ಉದ್ದೇಶಕ್ಕಾಗಿ? ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ.? ಎಂದು ನಿಖಿಲ್ ತೀಕ್ಷ್ಣವಾಗಿ ಪ್ರಶ್ನಿಸಿದರು.

ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ.? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ.? ಎಂದು ಸರ್ಕಾರವನ್ನು ಅವರು ಪ್ರಶ್ನಿಸಿದರು.

ಶೇ.80ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ ಎಂದು ಹೇಳಿದರು ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ. ರಾಜ್ಯದ ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ ಆದರೆ ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು ಎಂದು ನಿಖಿಲ್ ಎಚ್ಚರಿಸಿದ್ದಾರೆ.

ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ಸರ್ಕಾರ ಈ ಯೋಜನೆಯನ್ನು ಹಿಂಪಡೆಯದಿದ್ದರೇ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಅಲ್ಲದೇ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ತಿಳಿಸಲಾಯಿತು.

ಇದೇ ವೇಳೆ ಕೇಂದ್ರ ಸಚಿವರಾದ ಶ್ರೀ ಕುಮಾರಣ್ಣ ಅವರು ವರ್ಚ್ಯುವಲ್ ಸಭೆ ಮೂಲಕ ರೈತರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ರೈತರು ಎದೆಗುಂದಬೇಡಿ, ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಖುದ್ದಾಗಿ ನಾನೇ ಬಂದು ನಿಮ್ಮ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿಬಿ ಸುರೇಶ್ ಬಾಬು, ಮಾಜಿ ಶಾಸಕರಾದ ಎ. ಮಂಜು, ಡಾ. ಕೆ.ಅನ್ನದಾನಿ, ವಿಧಾನಪರಿಷತ್ ಸದಸ್ಯರಾದ ಟಿ.ಎನ್. ಜವರಾಯಿಗೌಡ ರವರು, ಟಿ.ಎಸ್. ಶರವಣ, ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಹಾಗೂ ರೈತಪರ ಹೋರಾಟಗಾರರು, ಸ್ಥಳೀಯ ರೈತರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ