Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸಂರಕ್ಷಣೆಗಾಗಿ ಬೀದಿ ನಾಟಕ

Advertisement
ಚಂದ್ರವಳ್ಳಿ ನ್ಯೂಸ್, ಕಾನ ಹೊಸಹಳ್ಳಿ :
ಸಮೀಪದ ಸಕಲಾಪುರದ ಹಟ್ಟಿ ಗ್ರಾಮದಲ್ಲಿ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಮತ್ತು ಭಾರತೀಯ ಜನಕಲಾ ಸಮಿತಿ
ಚಿತ್ರದುರ್ಗ ಇವರ ಸಹಯೋಗದಲ್ಲಿ ಸಾರ್ವಜನಿಕರಿಗೆ ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವಿಕೆ, ಅರಣ್ಯ ರಕ್ಷಣೆ, ಮತ್ತು ಸ್ವಚ್ಛತೆ, ನೈರ್ಮಲ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಗೌರವ ಅಧ್ಯಕ್ಷೆ ದಯಾ ಪುತ್ತೂರ್ಕರ್ ಮಾತನಾಡಿ ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವಿಕೆ, ಅರಣ್ಯ ರಕ್ಷಣೆ, ಮತ್ತು ಸ್ವಚ್ಛತೆ, ನೈರ್ಮಲ್ಯದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳನ್ನು ನಡೆಸಲಾಗುತ್ತದೆ. ಕಲಾವಿದರು ತಮ್ಮ ಪ್ರದರ್ಶನಗಳ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಎತ್ತಿ ತೋರಿಸಿ,

ಪ್ರೇಕ್ಷಕರೊಂದಿಗೆ ಸಂವಾದ ನಡೆಸಿ, ಪರಿಸರ ಬದಲಾವಣೆ ತರಲು ಅವರನ್ನು ಪ್ರೋತ್ಸಾಹಿಸುತ್ತಾರೆ. ಈ ತರದ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಅವರಿಗೆ ಪ್ರೋತ್ಸಾಹಿಸಬೇಕು ಮತ್ತು ತಮ್ಮ ಮನೆಯ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಕಸವನ್ನು ಸಂಗ್ರಹಿಸಿ ಬೇರ್ಪಡಿಸಿ ಸೂಕ್ತವಾಗಿ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಸದಸ್ಯೆ ಲೇಖಕಿ ಶಾರದಾ ಜೈರಾಂ ಮಾತನಾಡಿ ಮರಗಳ ನಾಶದಿಂದ ದಿನೇ ದಿನೇ ತಾಪಮಾನ ಏರಿಕೆಗೆ ಕಾರಣವಾಗಿದೆ ಆದಷ್ಟು ಮನೆಗೆ ಒಂದರಂತೆ ಸಸಿ ನೆಡಿ, ಯಥೇಚ್ಛವಾಗಿ ಶುದ್ಧ ನೀರು ಕುಡಿಯಿರಿ, ರಾಸಾಯನಿಕ ಕ್ರಿಮಿನಾಶಕ ಔಷಧಗಳ ಬಳಕೆ ತಗ್ಗಿಸಿ ಸಾವಯವ ಗೊಬ್ಬರ ಹಾಕಿ ಬೆಳೆ ಬೆಳೆಯುವ ಕಡೆ ಗಮನಹರಿಸುವುದು ಅತ್ಯಗತ್ಯ ಹಾಗೆಯೇ ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.


ಈ ಸಂದರ್ಭದಲ್ಲಿ ಶಿಕ್ಷಕಿ ಸಾಹಿತಿ ತಿಪ್ಪಮ್ಮ, ಜಯದೇವ ಮೂರ್ತಿ, ಭಾರತೀಯ ಜನಕಲಾ ಸಮಿತಿ ಸದಸ್ಯರಾದ ಜಯದೇವ್ ಮೂರ್ತಿ, ತಿಪ್ಪೀರಮ್ಮ ಸಕಲಾಪುರದಟ್ಟಿ, ಕವಯಿತ್ರಿ ಡಾ.ಗೌರಮ್ಮ, ಶಿವರುದ್ರಪ್ಪ ಪಂಡ್ರಹಳ್ಳಿ, ಚನ್ನಬಸಪ್ಪ, ಯಲ್ಲಪ್ಪ, ಶ್ರೀನಿವಾಸ, ಶಶಿಕಲಾ, ಆಂಜನೇಯ, ಪಂಚಾಕ್ಷರಯ್ಯ ಸೇರಿದಂತೆ ಇತರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ