Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯಾರ್ಥಿ ಬಸ್‍ಪಾಸ್ ಶುಲ್ಕ ಮರು ಪಾವತಿ: ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸೇವಾಸಿಂಧು ಫೋರ್ಟಲ್ ಮೂಲಕ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಪಾಸಿನ ಮೊತ್ತ ಮರುಪಾವತಿ ಮಾಡಲು ಕ್ರಮ ಕೈಗೊಂಡಿದೆ.

ರಾಜ್ಯ ಸರ್ಕಾರದ ಆದೇಶದನ್ವಯ, ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಪ್ರಯಾಣಿಸುವ ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಈಗಾಗಲೇ ದಿನಾಂಕ 29-05-2026 ರಿಂದ ಶುಲ್ಕ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿ ಮಾಡಲು ಇಲಾಖೆ ಅನುಮೋದನೆ ನೀಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಸರ್ಕಾರದ ಸೇವಾಸಿಂಧು ಫೋರ್ಟಲ್   ಲಿಂಕ್ (https://sevasindhuservices.karnataka.gov.in/buspassservices/)  ಮೂಲಕ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ ಆನ್‍ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಆಧಾರ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಅಥವಾ ತಮ್ಮ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು.

Advertisement

ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆಯಾಗಲಿದೆ ಹಾಗೂ ಈ ಬಗ್ಗೆ ಮೊಬೈಲ್‍ಗೆ ಎಸ್‍ಎಂಎಸ್ ಸಂದೇಶ ಬರಲಿದೆ. ಹಣವು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್‍ಗಳಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ