Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿನಿ ಹಾಕಿದ ದೇಶ ವಿರೋಧಿ ಪೋಸ್ಟ್​ ಗೆ ತೀವ್ರ ಟೀಕೆ

Advertisement
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂಧೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಇಡೇ ದೇಶವೇ ಹೆಮ್ಮೆ ಪಟ್ಟುಕೊಳ್ಳುತ್ತಿದೆ.

ಮಂಗಳೂರಿನ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ದೇಶ ವಿರೋಧಿಸಿ ಹಾಕಿದ ಪೋಸ್ಟ್​ ಭಾರಿ ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​ ಖಾತೆಯಲ್ಲಿ ಹ್ಯಾಷ್​ ಟ್ಯಾಗ್​ ಧಿಕ್ಕಾರ ಆಪರೇಷನ್​ ಸಿಂಧೂರ  ಎಂದು ಗುರುವಾರ ದಂದು ಪೋಸ್ಟ್ ಹಾಕಿದ್ದರು. ಇದಕ್ಕೆ ಸಾರ್ವಜನಿಕರು ಸೇರಿದಂತೆ ದೇಶ ಭಕ್ತರು ಸಾಕಷ್ಟು ವಿರೋಧ ವ್ಯಕ್ತ ಪಡಿಸುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ರೇಷ್ಮಾ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು, ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲುಎಲ್ಲೆಲ್ಲೂ ಕತ್ತಲು…!, #dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾರೆ.

ಆದರೆ ಹಾಕಿದ್ದ ಪೋಸ್ಟ್​ಗೆ ಸಮರ್ಥಿಸಿಕೊಂಡಿರು ರೇಷ್ಮಾ-
ರೇಷ್ಮಾ ಹಾಕಿದ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ತನ್ನನ್ನು ತಾನು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ
, ಗೌರವ ನನಗಿದೆ. ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ.

ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ, ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ.

ಯಾವುದೇ ಯುದ್ಧ ಆದಾಗ ಮಡಿಯುವವರು ಒಂದೆಡೆಯಾದರೆ ಆಯಾ ದೇಶದ ಬಹುತೇಕರು ವಿವಿಧ ಕಾರಣಗಳಿಗಾಗಿ ನೋವು ಅನುಭವಿಸುವಂತಾಗುತ್ತದೆ. ಭಾರತದ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳದಿರಲಿ, ಶಾಂತಿ, ಸೌಹಾರ್ದ ನೆಲೆಸಲಿ. ಭಯೋತ್ಪಾದನೆ ನಿರ್ಮೂಲನೆಯಾಗಲಿ. ಸಾವು ನೋವು ಇಲ್ಲದಾಗಲಿ ಎನ್ನುವುದಷ್ಟೇ ನನ್ನ ಉದ್ದೇಶ ಎಂದು ರೇಷ್ಮಾ ಹೊಸದಾಗಿ ಪೋಸ್ಟ್​ ಹಾಕಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ