ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯಿತು.
ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ನಂತರ ಅಣಕು ಮತದಾನವನ್ನು ಅಚ್ಚುಕಟ್ಟಾಗಿ ನಡೆಸಲಾಯಿತು.
ಮತದಾನದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಐಡಿ. ಕಾರ್ಡ್‌ಗಳನ್ನು ಗುರುತಿನ ಚೀಟಿಯಾಗಿ ಬಳಸಿ ಸಂಸತ್ ಚುನಾವಣೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕ ಸಂಪತ್ ಕುಮಾರ್ ಸಿ.ಡಿ, ಪ್ರಾಚಾರ್ಯ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜಾರೀನಾ, ಪಿಆರ್‌ಓ.ರವಿಕುಮಾರ್, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



