Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು "ಜ್ವರ" ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

ಚಂದ್ರವಳ್ಳಿ ನ್ಯೂಸ್, ಮಲೆಮಹದೇಶ್ವರ ಬೆಟ್ಟೆ:
ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ ಹೇಳಿದರು.
ಮಲೆಮಹದೇಶ್ವರ ಬೆಟ್ಟೆದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ಮಕ್ಕಳಿಗೆ ಪತ್ರಿಭಾ ಪುರಸ್ಕಾರ ನೀಡಿ ಸನ್ಮಾನಿ ಅವರು ಮಾತನಾಡಿದರು.


ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ.

ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ.

ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ. ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ  ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚನ್ನಾಗಿರುತ್ತದೆ. ಹೀಗಾಗಿ SSLC ಮತ್ತು PUC ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು ಎಂದರು.

ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ.

ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ.

ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ.

ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ  ನಾನು ಅಭಿನಂದಿಸುತ್ತೇನೆ ಎಂದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು