Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು, ಯುವ ಪೀಳಿಗೆ ಗಾಂಜಾ, ಬೈಕ್ ವೀಲಿಂಗ್ ತಡೆಯೊಡ್ಡಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಮತ್ತು ದೊಡ್ಡಬಳ್ಳಾಪುರ ಪೊಲೀಸ್
ಉಪವಿಭಾಗದ ವತಿಯಿಂದ ಎಸ್ಸಿ-ಎಸ್ಟಿ ಕುಂದು ಕೊರತೆಗಳ ಸಭೆಯನ್ನು ದೊಡ್ಡಬಳ್ಳಾಪುರ ನಗರದ ಆರ್.ಡಿ   ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಲಾಗಿತ್ತು. 

ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ರವಿ ಪಿ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಹಲವಾರು ಪರಿಶಿಷ್ಟ ಜಾತಿ-ಪಂಗಡದವರು ಮತ್ತು  ಅನೇಕ ದಲಿತ ಮುಖಂಡರು ಭಾಗವಹಿಸಿ ಜನಾಂಗಕ್ಕೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಮಾಡಿದರು.

ತಾಲ್ಲೂಕಿನಲ್ಲಿ ಗಾಂಜಾ ಮಾರಾಟದ ಹಾವಳಿ ತೀವ್ರವಾಗಿದ್ದು ಅನೇಕ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಪೀಳಿಗೆ ಗಾಂಜಾ ವ್ಯಸನಿಗಳಾಗುತಿದ್ದು ಬೈಕ್ ವೀಲಿಂಗ್ ಸೇರಿದಂತೆ ಅನೇಕ ಸಮಾಜಘಾತುಕ ಚಟುವಟಿಕೆಗಳು ಹೆಚ್ಚಾಗುತ್ತಿದೆ, ಅನೇಕ ಗ್ರಾಮಗಳಲ್ಲಿ ಇಂದಿಗು ದಲಿತರಿಗೆ ದೇವಾಲಯದ ಪ್ರವೇಶ ನಿಷಿದ್ದವಾಗಿದೆ ಇದರ ಬಗ್ಗೆ ಪೋಲಿಸ್ ಇಲಾಖೆ ದೇವಾಲಯ ಪ್ರವೇಶ ನಿಷಿದ್ದ ಮಾಡುವವರು ಮೇಲೆ ಕ್ರಮ ಜರುಗಿಸಬೇಕಿದೆ ಎಂದು ಕೆಲ ದಲಿತ ಮುಖುಂಡರು ಅಳಲು ತೋಡಿಕೊಂಡರು.

ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಕ್ರಮ ವಹಿಸಬೇಕಿರುವ ಅಬಕಾರಿ ಇಲಾಖೆ ಗಾಢ ನಿದ್ರೆಯಲ್ಲಿದೆ. ತಾಲ್ಲೂಕಿನಲ್ಲಿ ಪ್ರತಿ ಗ್ರಾಮಗಳಲ್ಲೂ ಸಹ ಸಣ್ಣ ಪುಟ್ಟ ಅಂಗಡಿಗಳಲ್ಲಿ ದಿನಬಳಕೆಯ ವಸ್ತುಗಳ ರೀತಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇದರಿಂದ ಗಲಾಟೆಗಳು ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಪೊಲೀಸ್ ಇಲಾಖೆ ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಕಾನೂನು ‌ಕ್ರಮ ಜರುಗಿಸಲು ಅನೇಕ ದಲಿತ‌ಮುಖುಂಡರು ಮನವಿ‌ಮಾಡಿದರು.

ಸಮಸ್ಯೆಗಳನ್ನು ಆಲಿಸಿದ ಡಿ.ವೈ.ಎಸ್.ಪಿ ರವಿ ಅವರು ಮಾತನಾಡಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರವಾಗಿ ಕ್ರಮವಹಿಸುವುದಾಗಿ ತಿಳಿಸಿ ದಲಿತರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಇಲಾಖೆಗೆ ತಿಳಿಸಲು ಹೇಳಿದರು. 

ಸಭೆಯಲ್ಲಿ ಉಪವಿಭಾಗದ ವ್ಯಾಪ್ತಿಗೆ ಬರುವ ನಗರ ಠಾಣೆಯ ಇನ್ಸ್‌ಪೆಕ್ಟರ್ ಅಮರೇಶ್ ಗೌಡ, ಇನ್ಸ್ಪೆಕ್ಟರ್ ಗಳಾದ ಹರಿವರ್ಧನ್, ಕಲ್ಲಪ್ಪ ಎಸ್ ಕರಾತ್, ದಿಲೀಪ್ ಕುಮಾರ್ ಸಿಬ್ಬಂದಿ ವರ್ಗದವರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ