Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ವಿರುದ್ಧ ಚಾಚ್ ಶೀಟ್ ಸಲ್ಲಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಕೋರ್ಟ್ಗೆ ೪
,೫೦೦ ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಕೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕ ಸಾಕ್ಷ್ಯಧಾರಗಳ ಮೇಲೆ ಪೊಲೀಸರು ನಟ ದರ್ಶನ್‌ನನ್ನು ಎ೨ನಿಂದ ಎ೧ ಆರೋಪಿಗೆ ಬಡ್ತಿ ನೀಡುತ್ತಾರೆ ಎನ್ನಲಾಗಿತ್ತು.

ಆದರೆ ಇದೀಗ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರರಣದಲ್ಲಿ ಪೊಲೀಸರು ಸುಮಾರು ೪,೫೦೦ ಪುಟಗಳಿಗೂ ಅಧಿಕ ಚಾರ್ಜ್ಶೀಟ್​​ ಅನ್ನು ಇಂದು (ಸೆಪ್ಟೆಂಬರ್ ೪) ಬೆಳಗ್ಗೆ ಬೆಂಗಳೂರಿನ ೨೪ನೇ ಎಸಿಎಂಎ ​ಕೋರ್ಟ್ಗೆ ಸಲ್ಲಿಸಿದ್ದಾರೆ.ಈ ಪ್ರಕರಣದಲ್ಲಿ ನಟ ದರ್ಶನ್ ಎ೨ ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ೧ ಆರೋಪಿ ಆಗಿದ್ದರು. ಇದನ್ನು ಚಾರ್ಜ್ ಶೀಟ್‌ನಲ್ಲಿ ದರ್ಶನ್ ಎ೧ ಹಗೂ ಪವಿತ್ರಾ ಎ೨ ಬದಲಾವಣೆ ಆಗಬಹುದು ಎಂದು ಅಂದಾಜಿತ್ತು.

ಆದರೆ, ಯಾವುದೇ ಬದಲಾವಣೆ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್‌ನನ್ನು ಎರಡನೇ ಆರೋಪಿಯಾಗಿ ಉಲ್ಲೇಖ ಮಾಡಿದ್ದು, ಪವಿತ್ರಾ ಅವರು ಎ೧ ಆರೋಪಿಯಾಗಿಯೇ ಮುಂದುವರೆದಿದ್ದಾರೆ.ಮತ್ತೊAದೆಡೆ ಪ್ರಕರಣ ತನಿಖೆ ಇನ್ನೂ ಪೂರ್ಣ ಆಗಿಲ್ಲ. ಆದ್ದರಿಂದ ಸಿಆರ್​ಪಿಸಿ ೧೭೩(೮) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಈ ಬಗ್ಗೆ ವಿಶೇಷ ಕೋರ್ಟ್​ಗೆ ಪೊಲೀಸರು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮುಖಾಂಶಗಳ ವಿವರನಟ ದರ್ಶನ್ ಸೇರಿ ೧೭ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.೩ ಪ್ರತ್ಯಕ್ಷ ಸಾಕ್ಷಿಗಳು ಇವೆ.ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ ೮ ವರದಿಗಳು ಇವೆ.ಒಟ್ಟು ೨೦೦ಕ್ಕೂ ಅಧಿಕಾ ಸಾಕ್ಷಿಗಳು ಇವೆ.ಕಿಡ್ನಾಪ್, ಹಲ್ಲೆ, ಕೊಲೆ ಬಳಿಕ ಮುಚ್ಚಿಹಾಕಲು ೩೦ ಲಕ್ಷ ರೂಪಾಯಿ ನೀಡಿದ್ದು ದರ್ಶನ್ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ದೊರೆದಂತಾಗಿದೆ. ಹಲ್ಲೆ ನಡೆಯುವ ಸ್ಥಳದಲ್ಲಿ ಪವಿತ್ರಾ ಗೌಡ & ದರ್ಶನ್ ಹಾಜರಿದ್ದು, ಈ ವೇಳೆ ಪವಿತ್ರಾ ಗೌಡ ರೇಣುಕಾಸ್ವಾಮಿ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಇವರಿಬ್ಬರ ಮೊಬೈಲ್ ಲೋಕೇಶನ್ ಕೂಡ ಲಭ್ಯವಾಗಿದೆ. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ