Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅನುಸರಿಸಿದರೆ ಯಶಸ್ಸು ಖಚಿತ..!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಯುವ ಜನತೆಯ ಬಗ್ಗೆ ಸ್ವಾಮಿ ವಿವೇಕಾನಂದರು ಹೇಳಿದ್ದೇನು..
? ಯುವ ಜನರನ್ನು ಪ್ರೇರೇಪಿಸಲು ಸ್ವಾಮಿ ವಿವೇಕಾನಂದರು ಯಾವ ತತ್ವವನ್ನು ಅನುಸರಿಸಿದ್ದರು ಅವರ ಅದೃಶ್ಯವನ್ನು ನಾವೆಲ್ಲರೂ ಯಾವ ರೀತಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ನಾವು ಚಿಂತನೆ ಮಾಡಬೇಕು.

ಯುವಕರ ಸ್ಫೂರ್ತಿಯಾದ ಸ್ವಾಮಿ ವಿವೇಕಾನಂದರು 1863 ರ ಜನವರಿ 12 ರಂದು ಜನಿಸಿದರು. ವಿವೇಕಾನಂದರು ಕಲ್ಕತ್ತಾದ ಕಾಯಸ್ಥ ಕುಟುಂಬದಲ್ಲಿ ಜನಿಸಿದರು. ವಿವೇಕಾನಂದರ ತಂದೆ ವಿಶ್ವನಾಥ ದತ್ತ. ಇವರು ಕಲ್ಕತ್ತಾದ ಹೈಕೋರ್ಟ್‌ನ ಪ್ರಸಿದ್ಧ ವಕೀಲರಾಗಿದ್ದರು. ಅದೇ ಸಮಯದಲ್ಲಿ, ಅವರ ತಂದೆ ಪಾಶ್ಚಿಮಾತ್ಯ ನಾಗರಿಕತೆಯನ್ನು ನಂಬಿದ್ದರು. ಇಷ್ಟೇ ಅಲ್ಲ, ವಿವೇಕಾನಂದರು ಕೂಡ ತಮ್ಮಂತೆ ಇಂಗ್ಲಿಷ್ ಕಲಿತು ದೊಡ್ಡವರಾಗುತ್ತಾರೆ ಎಂಬ ಕನಸು ಅವರ ತಂದೆಗಿತ್ತು.

ಆದರೆ, ಸ್ವಾಮಿ ವಿವೇಕಾನಂದರ ತಾಯಿಯ ನಂಬಿಕೆ ಹಿಂದೂ ಧರ್ಮದಲ್ಲಿತ್ತು. ನಿತ್ಯವೂ ಬೆಳಗ್ಗೆ ಎದ್ದಾಕ್ಷಣ ಅವರು ಮುಂಜಾನೆ ಮತ್ತು ಸಂಜೆ ಭಗವಂತನ ಆರಾಧನೆ ಮಾಡುತ್ತಿದ್ದರು.


ಸ್ವಾಮೀಜಿಯವರ ಬಾಲ್ಯ:
ವಿವೇಕಾನಂದರ ಬಾಲ್ಯದ ಹೆಸರು ನರೇಂದ್ರ ದತ್ತ. ತಾಯಿ ಸರಸ್ವತಿಯ ಮೇಲೆ ಸ್ವಾಮಿ ವಿವೇಕಾನಂದರಿಗೆ ಅಪಾರ ಪ್ರೀತಿಯಿತ್ತು ಮತ್ತು ಅವರೂ ಸಹ ತಮ್ಮ ತಾಯಿಯಂತೆ ದೇವರಿಗೆ ತುಂಬಾ ಅಂಟಿಕೊಂಡಿದ್ದರು.
16 ನೇ ವಯಸ್ಸಿನಲ್ಲಿ, ಸ್ವಾಮೀಜಿ ಕಲ್ಕತ್ತಾ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಯಶಸ್ವಿಯಾದರು.

ಸ್ವಾಮಿ ವಿವೇಕಾನಂದರ ಚಿಂತನೆಗಳು ಎಲ್ಲಾ ವರ್ಗ, ಜಾತಿ, ಧರ್ಮದ ಜನರಿಗೆ ಸದಾ ಪ್ರೇರಣೆ ನೀಡುತ್ತವೆ. ಯುವಕರ ಮೇಲಿನ ಅವರ ಅಪಾರ ನಂಬಿಕೆ ಮತ್ತು ಅವರಿಗಿರುವ ಚಿಂತನೆ ಅಗಾಧವಾಗಿತ್ತು. ಭಾರತ ಜಗತ್ತಿನ ಸೂಪರ್ ಪವರ್ ದೇಶವಾಗಬೇಕಾದರೆ ಯುವಜನರ ಭಾಗವಹಿಸುಕೆ ಅಗತ್ಯವಾಗಿ ಬೇಕು ಎಂದವರು ಬಹಳ ಹಿಂದೆ ಹೇಳಿದ್ದರು.

ಜಗತ್ತಿನಲ್ಲಿ ಭಾರತವನ್ನು ಯುವರಾಷ್ಟ್ರ ಎಂದು ಕರೆಯಲಾಗುತ್ತದೆ.ಏಕೆಂದರೆ ಭಾರತದಲ್ಲಿರುವ ಸಂಖ್ಯೆಯಷ್ಟು ಯುವ ಜನರು ಬೇರೆ ದೇಶದಲ್ಲಿ ಕಾಣಲು ಅಸಾಧ್ಯ.

 ಯುವ ಜನರನ್ನು ಪ್ರೇರೇಪಿಸಲು ಸ್ವಾಮಿ ವಿವೇಕಾನಂದರು ಜಗತ್ತಿಗೆ ನೀಡಿದ ಈ ಸಂದೇಶ ನಾವೆಲ್ಲರೂ ಕೂಡ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ.

1 ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ.
2 ದಿನಕ್ಕೆ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲದಿದ್ದರೆ, ನೀವು ವಿಶ್ವದ ಅತ್ಯಂತ ಬುದ್ಧಿವಂತ ವ್ಯಕ್ತಿಯೊಂದಿಗೆ ಸಂವಹನ ಮಾಡುವುದನ್ನು ಬಿಟ್ಟುಬಿಡುತ್ತೀರಿ.

3 ನೀವು ನಿಮ್ಮನ್ನು ನಂಬದ ಹೊರತು, ನೀವು ದೇವರನ್ನು ನಂಬಲು ಸಾಧ್ಯವಿಲ್ಲ.
4 ನಿಮಗೆ ಸಹಾಯ ಮಾಡುವ ಜನರನ್ನು ಎಂದಿಗೂ ಮರೆಯಬೇಡಿ. ನಿಮ್ಮನ್ನು ಪ್ರೀತಿಸುವವರನ್ನು ಎಂದಿಗೂ ದ್ವೇಷಿಸಬೇಡಿ. ನಿಮ್ಮನ್ನು ನಂಬಿದವರಿಗೆ ಎಂದಿಗೂ ಮೋಸ ಮಾಡಬೇಡಿ.
5 ಓದಲು ಏಕಾಗ್ರತೆ ಅಗತ್ಯ, ಏಕಾಗ್ರತೆಗೆ ಗಮನ ಅಗತ್ಯ. ಧ್ಯಾನದ ಮೂಲಕ ನಾವು ಇಂದ್ರಿಯಗಳ ಮೇಲೆ ನಿಯಂತ್ರಣವನ್ನು ಇಟ್ಟುಕೊಂಡು ಏಕಾಗ್ರತೆಯನ್ನು ಸಾಧಿಸಬಹುದು.
6 ನಿಮ್ಮ ಮನಸ್ಸನ್ನು ಉನ್ನತ ಆಲೋಚನೆಗಳಿಂದ ಮತ್ತು ಅತ್ಯುನ್ನತ ಆದರ್ಶಗಳಿಂದ ತುಂಬಿಕೊಳ್ಳಿ. ಇದರ ನಂತರ ನೀವು ಮಾಡುವ ಯಾವುದೇ ಕೆಲಸವು ಉತ್ತಮವಾಗಿರುತ್ತದೆ.

7 ಯಾವ ವ್ಯಕ್ತಿಯು ಅಮರತ್ವವನ್ನು ಪಡೆದಿರುತ್ತಾನೋ ಅವನು ಯಾವುದೇ ಲೌಕಿಕ ವಸ್ತುಗಳಿಂದ ವಿಚಲಿತನಾಗುವುದಿಲ್ಲ.
8 ದೈಹಿಕವಾಗಿ, ಮಾನಸಿಕವಾಗಿ ಮತ್ತು ಧಾರ್ಮಿಕವಾಗಿ ನಿಮ್ಮನ್ನು ದುರ್ಬಲಗೊಳಿಸುವ ಯಾವುದಾದರೂ, ಅದನ್ನು ವಿಷದಂತೆ ತಿರಸ್ಕರಿಸಿ.
9 ಯಾವಾಗಲೂ ನಾವು ಮಾತನಾಡುವ ಮುನ್ನ ಸರಿಯಾಗಿ ಯೋಚನೆ ಮಾಡಿ ಮಾತನಾಡಬೇಕು. ನಮ್ಮ ಆಲೋಚನೆಗಳು ಯಾವಾಗಲೂ ಜೀವಂತವಾಗಿರುತ್ತದೆ ಮತ್ತು ಪದಗಳು ಒಬ್ಬರ ಬಾಯಿಂದ ಇನ್ನೊಬ್ಬರ ಬಾಯಿಗೆ ಸಂಚರಿಸುತ್ತಲೇ ಇರುತ್ತದೆ.

10 ಹೋರಾಟವು ದೊಡ್ಡದಾಗಿದ್ದರೆ, ವಿಜಯವು ಹೆಚ್ಚು ಅದ್ಭುತವಾಗಿರುತ್ತದೆ. ನೀವು ಸಮಸ್ಯೆಗಳನ್ನು ಎದುರಿಸದಿದ್ದರೆ ನೀವು ತಪ್ಪು ದಾರಿಯಲ್ಲಿದ್ದೀರಿ ಎನ್ನುವುದನ್ನು ಖಚಿತವಾಗಿ ಹೇಳಬಹುದು. ನಿಮ್ಮನ್ನು ನೀವು ದುರ್ಬಲ ಎಂದು ಪರಿಗಣಿಸುವುದೇ ದೊಡ್ಡ ಪಾಪ.

10 ತತ್ವಗಳು ಸ್ವಾಮಿ ವಿವೇಕಾನಂದರು ಸಮಾಜದ ಉದ್ಧಾರಕ್ಕೆ ಹೇಳಿದ ಮಾತುಗಳಾಗಿವೆ. ಸ್ವಾಮಿ ವಿವೇಕಾನಂದರು ಯಾವಾಗಲೂ ಸಮಾಜದ ಒಳಿತಿಗಾಗಿ, ಯುವ ಜನರ ಏಳಿಗೆಗಾಗಿ ಶ್ರಮಿಸಿದವರು. ಇವರ ಈ ತತ್ವಗಳನ್ನು ನಾವು ನಮ್ಮ ಜೀವನದಲ್ಲಿ  ಅಳವಡಿಸಿಕೊಂಡರೆ ಯಶಸ್ಸನ್ನು ಖಂಡಿತ ಸಾಧಿಸಬಹುದು. ಸ್ವಾಮಿ ವಿವೇಕಾನಂದರು ಜಗತ್ತಿಗೆ ನೀಡಿದ ಈ ಅಪೂರ್ವವಾದ ಸಂದೇಶ ನಮ್ಮೆಲ್ಲರಿಗೂ ದಾರಿದೀಪವಾಗಲಿ.
ಲೇಖನ-ರಾಘವೇಂದ್ರ ಪ್ರಭು ಕರ್ವಾಲು, ಲೇಖಕರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ