Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಪ್ರಥಮ್ ವಿರುದ್ಧ ಗುಡುಗಿದ ಆರೋಪಿ ಯಶಸ್ವಿನಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ):
 ಪ್ರಥಮ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗಳಾದ ಯಶಸ್ವಿನಿ ಮತ್ತು ಬೇಕರಿ ರಘು ಅವರು ಜಾಮೀನು ಪಡೆಯಲು ವಕೀಲರ ಮೂಲಕ ದೊಡ್ಡಬಳ್ಳಾಪುರದ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರಾದರು.


ಮಾಧ್ಯಮದವರೊಂದಿಗೆ ಈ ವೇಳೆ ಮಾತನಾಡಿದ ಯಶಸ್ವಿನಿ, ನಟ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಸಿದರು.

ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ನಮ್ಮ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು? ಅವರಿಂದ ನನಗೇನಾಗಬೇಕು? ಸುಮ್ಮನೆ ದರ್ಶನ್ ಹೆಸರು ತಂದಿದ್ದಾರಷ್ಟೇ. ಪ್ರಥಮ್​ನನ್ನು ಬಿಡೋ ಮಾತೇ ಇಲ್ಲ, ನಾನಂತೂ ಬಿಡುವ ಮಗಳೇ ಅಲ್ಲ ಎಂದು ಆರೋಪಿ ಯಶಸ್ವಿನಿ ಗುಡುಗಿದರು.

ದರ್ಶನ್ ಅಭಿಮಾನಿಗಳೆಂದು ಹೇಳಿಕೊಂಡಿರುವ ಯಶಸ್ವಿನಿ ಮತ್ತು ಬೇಕರಿ ರಘು ಮೇಲೆ ಭಾರತೀಯ ನ್ಯಾಯ ಸಂಹಿತೆಯಡಿ 351(2)(3), 352,126(2) 3(5) ಪ್ರಕರಣ ದಾಖಲಿಸಿದ್ದರು.

ಆರೋಪಿಗಳು ಕೋರ್ಟ್​ಗೆ ಶರಣಾಗುವ ಮಾಹಿತಿ ತಿಳಿದ ಪೊಲೀಸರು, ಬಂಧಿಸುವ ಯತ್ನ ನಡೆಸಿದರು. ಆದರೆ, ಅವರು ಪೊಲೀಸರ ಕಣ್ಣು ತಪ್ಪಿಸಿ ಕೋರ್ಟ್‌ ಒಳಗೆ ಹೋದರು. ಆರೋಪಿಗಳು ಜಾಮೀನಿಗೆ ಅರ್ಜಿ ಹಾಕಿದ್ದು, ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ