Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತುಪ್ರದರ್ಶನ- ಸಚಿವ ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.


ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ  ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ, ಸರ್ಕಾರದ ಸಾಧನೆ ಫಲಕಗಳನ್ನು ವೀಕ್ಷಿಸಿದರು.


ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ  ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ.200 ಹಣ ನೀಡುವ ಗೃಹಲಕ್ಷ್ಮಿ ಯೋಜನೆ, ಹಸಿವು ಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ, ಡಿಪ್ಲೊಮಾ  ಪೂರ್ಣಗೊಳಿಸಿದ ಯುವ ಜನತೆಗೆ ಉದ್ಯೋಗ ಪಡೆಯಲು  ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ ರೂ.3000 ಹಾಗೂ ಡಿಪ್ಲೊಮೊ ಪದವಿದರರಿಗೆ ರೂ.1500 ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು  ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ  ಆಸರೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯರು ವೀಕ್ಷಿಸಿದರು.




ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಗಳನ್ನು ಒಳಗೊಂಡ ಸೆಲ್ಫಿ ಪಾಯಿಂಟ್‍ಗಳನ್ನು ವೀಕ್ಷಿಸಿ ಪ್ರಶಂಸಿದ ಜಿಲ್ಲಾ ಉಸ್ತುವಾರಿ ಸಚಿವರು, ಈ ಸೆಲ್ಫಿ ಪಾಯಿಂಟ್‍ಗಳಲ್ಲಿ ಚಳ್ಳಕೆರೆ ಶಾಸಕರಾದ ರಘುಮೂರ್ತಿ ಅವರೊಂದಿಗೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡರು.  ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಕೂಡ ಸೆಲ್ಫಿಪಾಯಿಂಟ್‍ನಲ್ಲಿ ನಿಂತು ಫೋಟೊ ತೆಗೆಯಿಸಿಕೊಂಡು ಸಂತಸ ವ್ಯಕ್ತಪಡಿಸಿದರು.  


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು, ಜೂನ್ 28 ರಿಂದ 30 ರವರೆಗೆ ವಸ್ತುಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿಲು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾಹಿತಿ ನೀಡಿದರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ. ಈ ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಗಳನ್ನೊಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳಿಂದ ಪಡೆಯುವಂತೆ  ಬಿಂಬಿಸುವ ಸೆಲ್ಪಿ ತೆಗೆದುಕೊಂಡು ಸಾರ್ವಜನಿಕರು ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ  ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಡಿವೈಎಸ್‍ಪಿ ದಿನಕರ್, ಸೇರಿದಂತೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಸದಸ್ಯರು ಮತ್ತಿತರರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ