Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಸಚಿವ ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಅತ್ಯುತ್ತಮ ವ್ಯವಸ್ಥೆಯಾಗಿದೆ. ಸಾರ್ವಜನಿಕರು ಇದಕ್ಕೆ ಬೆಂಬಲ ನೀಡಬೇಕು. ಪೊಲೀಸ್ ಇಲಾಖೆ ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು. ಅಪರಾಧಗಳನ್ನು ತಡೆಯಲು ಪೊಲೀಸರಿಗೆ ಸಾರ್ವಜನಿರ ಸಹಕಾರ ಅಗತ್ಯವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮನೆ ಮನೆಗೆ ಪೊಲೀಸ್ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.  


ದೇಶದಲ್ಲೇ ವಿನೂತನವಾದ ಮನೆ ಮನೆಗೆ ಪೊಲೀಸ್ಎನ್ನುವ ಪ್ರಯೋಗವನ್ನು ರಾಜ್ಯ ಪೊಲೀಸ್ ಇಲಾಖೆ ಮಾಡುತ್ತಿದೆ. ಇದನ್ನು ಯಶಸ್ವಿಗೊಳಿಸುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಪ್ರತಿಯೊಂದು ತಾಲ್ಲೂಕಿನಲ್ಲೂ 70 ರಿಂದ 80 ಸಾವಿರ ಮನೆಗಳು ಇವೆ. ಬೀಟ್ ಪೊಲೀಸರು ತಮ್ಮ ವ್ಯಾಪ್ತಿಯ ಪ್ರತಿ ಮನೆಯ ವಿವರಗಳನ್ನು ಸಂಗ್ರಹಿಸಿ ಎಲ್ಲಾ ರೀತಿಯ ಅಪರಾಧ ಕೃತ್ಯ ತಡೆಯಲು ಜಾಗರೂಕರಾಗಿರಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರು ಸಮರ್ಥವಾಗಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.


ಪೊಲೀಸ್ ಇಲಾಖೆ ಬಲಪಡಿಸಲು ಸಿದ್ಧ: ಪೊಲೀಸ್ ಇಲಾಖೆ ಬಲಪಡಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಶಾಸಕರ ಅನುದಾನದಲ್ಲಿ 16 ವಾಹನಗಳನ್ನು ಪೊಲೀಸ್ ಇಲಾಖೆಗೆ ನೀಡಲಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ವಸತಿ ಗೃಹ ನಿರ್ಮಾಣ ಮಾಡುವಂತೆ ಕೋರಿದು, ಮುಂಬರುವ ಆಯವ್ಯಯದಲ್ಲಿ ಅನುದಾನ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಸಚಿವ ಡಿ.ಸುಧಾಕರ್ ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡಲು ಮನೆ ಮನೆಗೆ ಪೊಲೀಸ್ ಎನ್ನುವ ಕಾರ್ಯಕ್ರಮ ಜಾರಿ ಮಾಡಲಾಗಿದೆ.

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸರಹದ್ದನ್ನು ಬೀಟ್‍ಗಳನ್ನಾಗಿ, ನಂತರ ಈ ಬೀಟ್‍ಗಳನ್ನು ಸಬ್‍ಬೀಟ್‍ಗಳನ್ನಾಗಿ ವಿಂಗಡಿಸಲಾಗುವುದು. ಪ್ರತಿ ಸಬ್ ಬೀಟ್‍ನಲ್ಲಿ 40 ರಿಂದ 50 ಮನೆಗಳನ್ನು ಒಳಗೊಂಡ ಕ್ಲಸ್ಟರ್‍ಗಳ ರಚನೆ ಮಾಡಲಾಗುವುದು. ಕ್ಲಸ್ಟರ್‍ಗೆ ನೇಮಿಸಿದ ಪೊಲೀಸ್ ಸಿಬ್ಬಂದಿ ಬೀಟ್ ವೇಳೆ ಪ್ರತಿ ಮನೆಗಳಿಗೂ ಭೇಟಿ ನೀಡುತ್ತಾರೆ.

ಈ ವೇಳೆ ಮನೆಗಳಲ್ಲಿ ಕಂಡುಬರುವ ಸಮಸ್ಯೆಗಳನ್ನು ಗುರುತಿಸಿ, ಠಾಣೆಯ ನೊಂದಣಿ ಪುಸ್ತಕದಲ್ಲಿ ನಮೂದಿಸುತ್ತಾರೆ. ಏನಾದರೂ ದೊಡ್ಡ ಸಮಸ್ಯೆಗಳು ಇದ್ದರೇ ಪೊಲೀಸ್ ಇನ್ಸೆಪಕ್ಟರ್ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ ಎಂದರು.


ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿಸುವುದರ ಜೊತೆಗೆ, ಸಾರ್ವಜನಿಕರಲ್ಲಿ ಕಾಯ್ದೆ ಕಾನೂನುಗಳ ಕುರಿತು ಜಾಗೃತಿ ಸಹ ಮೂಡಿಸಲಾಗುವುದು. ಇದರೊಂದಿಗೆ ಏರಿಯಾದ ಮನೆಗಳಲ್ಲಿ ಹೆಚ್ಚಿನ ರಕ್ಷಣಾ ವ್ಯವಸ್ಥೆ ಅಳವಡಿಸಿಕೊಳ್ಳಲು ಪೊಲೀಸರು ಸಲಹೆಯನ್ನು ಸಹ ನೀಡುತ್ತಾರೆ. ಪೊಲೀಸರು ಜನರ ರಕ್ಷಣೆಗಾಗಿ ಇದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗಿದವರು ಮಾತ್ರ ಪೊಲೀಸರನ್ನು ಕಂಡರೆ ಭಯ ಪಡಬೇಕು.



ಸಾಮಾನ್ಯ ಜನರಲ್ಲಿ ಪೊಲೀಸರನ್ನು ಕಂಡರೆ ವಿಶ್ವಾಸ ಹಾಗೂ ಧೈರ್ಯ ಮೂಡಬೇಕು. ಜನರು ಏನೇ ಸಮಸ್ಯೆಗಳು ಹಾಗೂ ಮಾಹಿತಿಯನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳ ಮನೋಭಾವ ಕೂಡ ಬದಲಾಗಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.


ಜಿಲ್ಲೆಯಲ್ಲಿ ನಮ್ಮ ನಡೆ ಜಾಗೃತಿ ಕಡೆಗೆ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳಲ್ಲಿ ಅಪರಾಧ ಕೃತ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸರ ಬಗ್ಗೆ ಸಾರ್ವಜನಿಕರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ದೇಶದ ಭದ್ರತೆ, ಮಹಿಳೆ ಮತ್ತು ಮಕ್ಕಳ ರಕ್ಷಣೆ ಬರೀ ಪೊಲೀಸರ ಕರ್ತವ್ಯವಲ್ಲ ಪ್ರತಿಯೊಬ್ಬ ನಾಗರಿಕರು ಸಹ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕಳುವಾದ ಮೊಬೈಲ್‍ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಷ್ಠಾಧಿಕಾರಿ ಉಮೇಶ್ ಈಶ್ವರ್ ನಾಯ್ಕ್, ಪೊಲೀಸ್ ಉಪಾಧೀಕ್ಷರಾದ ಪಿ.ಕೆ.ದಿನಕರ್, ರಾಜಣ್ಣ, ಶಿವಕುಮಾರ್, ಶ್ರೀನಿವಾಸ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ