Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಹಾಸ್ ಶೆಟ್ಟಿ ಅವರ ಪೂರ್ವನಿಯೋಜಿತ ಬರ್ಬರ ಹತ್ಯೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳೂರಿನಲ್ಲಿ ಗುರುವಾರ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆ ಪೂರ್ವನಿಯೋಜಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದ್ದಾರೆ.


ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಶುಕ್ರವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರಕ್ಕೆ ಎಸ್‍ಡಿಪಿಐ, ಪಿಎಫ್‍ಐ ಮೇಲಿನ ಪ್ರೀತಿಯಿಂದಾಗಿ ಸುಹಾಸ್ ಶೆಟ್ಟಿ ಹತ್ಯೆಯಂಥ ದುಷ್ಕೃತ್ಯ, ಹಿಂದೂಗಳ ಬೆದರಿಕೆ- ಹಿಂದೂಗಳ ಹತ್ಯೆಗೆ ಶಕ್ತಿ ಕೊಟ್ಟಂತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.
ಕಾಶ್ಮೀರದಲ್ಲಿ ಹಿಂದೂಗಳ ಮಾರಣಹೋಮ ಆಗಿದೆ. ಇದನ್ನು ದೇಶ-ರಾಜ್ಯದ ಜನರು ಮರೆತಿಲ್ಲ. ಇದರ ನಡುವೆ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವುದು ಖಂಡನೀಯ ಎಂದರು.


ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶ ದ್ರೋಹಿಗಳು, ಕೊಲೆಗಡುಕರಿಗೆ ಏನು ಮಾಡಿದರೂ ನಡೆಯುತ್ತದೆ ಎಂಬ ಆತ್ಮವಿಶ್ವಾಸ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಪದೇ ಪದೇ ಇಂಥ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ ಎಂದು ವಿಜಯೇಂದ್ರ ಅವರು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳನ್ನು ಬೆದರಿಸುವ ಕೆಲಸ ನಡೆದಿದೆ. ಹಿಂದೂ ಮುಖಂಡರ ಕಗ್ಗೊಲೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಗೃಹ ಸಚಿವರು ಬದುಕಿಲ್ಲವೇ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ? ರಾಜ್ಯದ ಕಾನೂನು- ಸುವ್ಯವಸ್ಥೆ ಏನಾಗಿದೆ? ಎಂದು ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದರು.

ಒಬ್ಬ ಹಿಂದೂ ಕಾರ್ಯಕರ್ತನ ಜೀವಕ್ಕೆ ಬೆದರಿಕೆ ಇದೆ ಎಂದು ಗೊತ್ತಿದ್ದರೂ ಯಾಕೆ ಇಂಥ ಘಟನೆ ಆಗಲು ಸಾಧ್ಯವಾಯಿತು?. ಮುಖ್ಯಮಂತ್ರಿಗಳ ಮೃದು ಧೋರಣೆಯು ಸುಹಾಸ್ ಶೆಟ್ಟಿ ಕೊಲೆಗೆ ಕಾರಣ ಎಂದು ಅವರು ಟೀಕಿಸಿದರಲ್ಲದೆ ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಕಗ್ಗೊಲೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಡಲಿದ್ದೇವೆ ಎಂದು ವಿಜಯೇಂದ್ರ ಎಚ್ಚರಿಸಿದರು.

ಮಂಗಳೂರಿಗೆ ತೆರಳಿ ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸುವೆ. ಪಕ್ಷದ ಮುಖಂಡರು ಅಲ್ಲಿಗೆ ಬರಲಿದ್ದಾರೆ. ಹಿಂದೂ ವಿರೋಧಿ ರಾಜ್ಯ ಸರ್ಕಾರ ತೊಲಗುವವರೆಗೆ ರಾಜ್ಯದ ಜನರಿಗೆ ನೆಮ್ಮದಿ ಇರಲಾರದು ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ಕೆಲ ತಿಂಗಳುಗಳಿಂದ ಮುಖ್ಯಮಂತ್ರಿಗಳ ಹೇಳಿಕೆಯು ದೇಶದ್ರೋಹಿಗಳಿಗೆ ಶಕ್ತಿ ಕೊಡುವಂತಿದೆ. ಗೃಹ ಸಚಿವರ ನಿಷ್ಕ್ರಿಯತೆಯಿಂದ ಕರ್ನಾಟಕದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಡವಳಿಕೆಗಳು, ಹಿಂದೂ ವಿರೋಧಿ ನೀತಿಯಿಂದ ಇಂಥ ದೇಶ ದ್ರೋಹಿಗಳಿಗೆ ಶಕ್ತಿ ತುಂಬುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಗೆ ಹೆದರಿಕೊಂಡು ಜಾತಿ ಗಣತಿ ನಡೆಸಲು ತೀರ್ಮಾನಿಸಿದ್ದಾರೆ ಎಂಬ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗಬೇಕು. ಇವರಿಗೆ ಕಳಕಳಿ ಇದ್ದರೆ, ಸ್ವಾತಂತ್ರ್ಯ ಬಂದು 55- 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವರಿಂದ ಜಾತಿ ಗಣತಿ ನಡೆಸಲು ಯಾಕೆ ಸಾಧ್ಯವಾಗಿಲ್ಲ?. ಸಿದ್ದರಾಮಯ್ಯನವರು ಸಮಾಜ ಸಮಾಜದ ನಡುವೆ ಕಂದಕ ಸೃಷ್ಟಿಸುವುದರಲ್ಲಿ ಹಾಗೂ ಜಾತಿ - ಜಾತಿಗಳ ನಡುವೆ ವಿಷಬೀಜ ಬಿತ್ತುವುದರಲ್ಲಿ ನಿಸ್ಸೀಮರಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ