Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲು

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕಾಂಗ್ರೆಸ್ ವಿರುದ್ಧ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂರನ್ನು ರಸ್ತೆಯಲ್ಲಿ ಹುಡುಕಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ.


 ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಇಸ್ಲಾಮೀಕರಣ ಮತ್ತು ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಕೃಷಿ ಭೂಮಿ, ದೇವಸ್ಥಾನ, ಮಠಗಳು, ಪುರಾತತ್ವ ಇಲಾಖೆಯ ಅಧೀನದಲ್ಲಿರುವ ಶಾಲಾ ಕಾಲೇಜುಗಳ ಆಸ್ತಿಗಳನ್ನೂ ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲಾಗಿದೆ. ಸರ್.ಎಂ ವಿಶ್ವೇಶ್ವರಯ್ಯನವರು ಹುಟ್ಟಿದ ಹಳ್ಳಿಯನ್ನೂ ಅವರು ಬಿಟ್ಟಿಲ್ಲ.

ಮುಸ್ಲಿಂ ಮುಖಂಡರೊಬ್ಬರು ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಸಿದ್ಧತೆ ನಡೆಸಿದ್ದು, ಅಂಬೇಡ್ಕರ್ ಅವರನ್ನು ಅವಮಾನಿಸಿದರೂ ಕಾಂಗ್ರೆಸ್ ಸರ್ಕಾರ ಇಸ್ಲಾಮೀಕರಣವನ್ನು ನಿರಂತರವಾಗಿ ಬೆಂಬಲಿಸುತ್ತಿದೆ ಎಂದು ಈಶ್ವರಪ್ಪ ದೂರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಘೋಷಿಸಲು ಮುಂದಾಗಿದ್ದಾರೆ.

ಹಿಂದೂಸ್ತಾನವನ್ನು ಪಾಕಿಸ್ತಾನವನ್ನಾಗಿ ಮಾಡಲು ಹವಣಿಸುತ್ತಿದ್ದಾರಾ? ಹೀಗೆಯೇ ಮುಂದುವರಿದರೆ ಸಂತರು, ಋಷಿಮುನಿಗಳ ನೇತೃತ್ವದಲ್ಲಿ ಗಲಭೆಗಳು ಭುಗಿಲೇಳುವ ಕಾಲ ಬರಲಿದೆ. ಕಾಂಗ್ರೆಸ್ ನಾಯಕರನ್ನು ಬೇಟೆಯಾಡಿ ಕೊಲ್ಲುವ ದಿನಗಳು ಬಂದರೆ ಆಶ್ಚರ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹೇಳಿಕೆಗಳು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಈಶ್ವರಪ್ಪ ಅವರು ಒಂದು ಸಮುದಾಯ ಮತ್ತು ರಾಜಕೀಯ ಪಕ್ಷದ ವಿರುದ್ಧ ದ್ವೇಷ ಹುಟ್ಟುಹಾಕುವ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ