ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವದ್ದೀಕೆರೆ ಗ್ರಾಮದ ಸೂರ್ಯಕಾಂತಿ ಜಮೀನುಗಳಿಗೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಹಾಗೂ ಸಚಿವರ ತಂಡ ಭೇಟಿ ನೀಡಿ ಪ್ರತ್ಯಕ್ಷ ಪರಿಶೀಲನೆ ನಡೆಸಿತು.
ಮಳೆಯ ತೀವ್ರ ಅಭಾವದಿಂದಾಗಿ ಸೂರ್ಯಕಾಂತಿ ಬೆಳೆ ಸಂಪೂರ್ಣ ಒಣಗುತ್ತಿರುವುದನ್ನು ಕಂಡು ಕಳವಳ ವ್ಯಕ್ತಪಡಿಸಿದ ನಾಯಕರು, ಬೆಳೆಯ ಪ್ರಸ್ತುತ ಸ್ಥಿತಿಗತಿ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸ್ಥಳೀಯ ರೈತರಿಂದ ನೇರವಾಗಿ ಮಾಹಿತಿ ಪಡೆದುಕೊಂಡರು.
ಅಲ್ಲದೆ, ಸ್ಥಳದಲ್ಲಿದ್ದ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಬೆಳೆ ಹಾನಿಯ ಪ್ರಮಾಣದ ಕುರಿತು ವಿವರಣೆ ಪಡೆದರು. ಈ ಪರಿಶೀಲನಾ ಭೇಟಿಯ ವೇಳೆ ಕಂದಾಯ ಸಚಿವ ಡಾ.ಜಿ ಪರಮೇಶ್ವರ್, ಸಚಿವರಾದ ಈಶ್ವರ ಖಂಡ್ರೆ ಅವರು ಉಪಸ್ಥಿತರಿದ್ದು, ರೈತರ ಕುಂದುಕೊರತೆಗಳನ್ನು ಆಲಿಸಿದರು.



