Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ಗಳ ಸರಬರಾಜು ಸ್ಥಗಿತ-ಸೌಮ್ಯ

Advertisement
 ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ಗಳ ಸರಬರಾಜನ್ನು ಕಳೆದ ಮೂರು ದಿನಗಳಿಂದ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸೌಮ್ಯ ತಿಳಿಸಿದರು.

ಸಿಲಿಂಡರ್​ಗಳ ಸರಬರಾಜು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ವಾಣಿಜ್ಯ ಬಳಕೆ ಎಲ್​ಪಿಜಿ ಬಳಸುತ್ತಿರುವ ಉದ್ದಿಮೆದಾರರಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳುವಂತೆ ಸೂಚಿಸಲಾಗಿದೆ. ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್‌ಗಳ ಸರಬರಾಜು ಆರಂಭವಾದ ತಕ್ಷಣ ಪುನಃ ಸರಬರಾಜು ಮಾಡಲಾಗುವುದು ಎಂದು ಹೇಳಿದರು.
ಡೊಮೆಸ್ಟಿಕ್ ಎಲ್​ಪಿಜಿ ಸಿಲಿಂಡರ್​ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗಿಲ್ಲ. ಅಲ್ಲದೇ
, ಎಷ್ಟು ಸಂಖ್ಯೆಗಳ ಬುಕ್ಕಿಂಗ್​ ಆಗಿದೆಯೋ ಅಷ್ಟು ಸಂಖ್ಯೆಯ ಸಿಲಿಂಡರ್​ಗಳು ನಮ್ಮಲ್ಲಿ ಲಭ್ಯವಿದೆ. ಆಯಿಲ್​ ಕಂಪನಿಗಳ ಪ್ರತಿನಿಧಿಗಳ ಮೂಲಕ ನಾನು ಮಾಹಿತಿ ಸಂಗ್ರಹಿಸಿದ ಬಳಿಕವೇ ಮಾತನಾಡುತ್ತಿದ್ದೇನೆ. ಆಸ್ಪತ್ರೆ, ಹಾಸ್ಟೆಲ್ ಹಾಗೂ ಮನೆಗಳಿಗೆ ಸಿಲಿಂಡರ್​ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಗಮನಹರಿಸಬೇಕೆಂದು ಈಗಾಗಲೇ ಸರ್ಕಾರ ಕೂಡ ಸೂಚನೆ ನೀಡಿದೆ ಎಂದು ಅವರು ತಿಳಿಸಿದರು.

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಳನ್ನು ಹೋಟೆಲ್ ಸೇರಿದಂತೆ ವಾಣಿಜ್ಯ ಬಳಕೆ ಉದ್ದೇಶದಿಂದ ಬಳಸುತ್ತಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಅಲ್ಲದೇ, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಎಲ್ಲ ಗ್ಯಾಸ್ ಏಜೆನ್ಸಿಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ವಾಣಿಜ್ಯ ಬಳಕೆ ಸಿಲಿಂಡರ್​ ಅವಲಂಬಿಸಿದ್ದ ಹೋಟೆಲ್​ಗಳು ಸಂಪೂರ್ಣವಾಗಿ ತಮ್ಮ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿವೆ. ಕಾಫಿ, ಟೀ ಮಾರಾಟ ಮಾಡಲು ಮಾತ್ರ ಕೆಲ ಹೋಟೆಲ್​ಗಳು ಮುಂದಾಗಿವೆ. ಅಲ್ಲದೆ, ಕೆಲವು ಹೋಟೆಲ್‌ಗಳು ಹಾಗೂ ಬೀದಿಬದಿ ಕ್ಯಾಂಟೀನ್​ಗಳಲ್ಲಿ ಸೌದೆ ಬಳಸಿ ಆಹಾರ ತಯಾರಿಸಲಾಗುತ್ತಿದೆ.

ಯುದ್ಧದ ಪರಿಣಾಮ ದೇಶದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವುದರಿಂದ ಕಮರ್ಷಿಯಲ್ ಸಿಲಿಂಡರ್‌ಗಳ ಕೃತಕ ಅಭಾವ ಸೃಷ್ಟಿಸುವವರು ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.​

ಅಂತಾರಾಷ್ಟ್ರೀಯ ಮಟ್ಟದ ಉದ್ವಿಗ್ನತೆಯಿಂದಾಗಿ ದೇಶದಲ್ಲಿ ಅನಿಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ಯಾಸ್ ಗೋದಾಮುಗಳಿಗೆ ಹೊಯ್ಸಳ ಸಿಬ್ಬಂದಿ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಪಿಎಸ್‌ಐ ಮಟ್ಟದ ಅಧಿಕಾರಿಗಳು ಖುದ್ದು ತೆರಳಿ ನಗರದ ಎಲ್ಲಾ ಗೋದಾಮುಗಳಲ್ಲಿ ಲಭ್ಯವಿರುವ ಸಿಲಿಂಡರ್‌ಗಳ ಸಂಖ್ಯೆ, ಬಂದಿರುವ ಆರ್ಡರ್‌ಗಳು ಮತ್ತು ವಿತರಣೆಯ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ