Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪನ್ಯಾಸಕರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದ್ವಿತೀಯ ಪಿಯುಸಿ  ಪರೀಕ್ಷೆಯ ಮೌಲ್ಯಮಾಪನ ಸೇರಿದಂತೆ   ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ  ಪ್ರಾಂಶುಪಾಲರು‌ ಮತ್ತು‌ ಉಪನ್ಯಾಸಕರು  ನಡೆಸುವ  ಹೋರಾಟದಲ್ಲಿ  ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ  ಭಾಗವಹಿಸುತ್ತಿರುವುದಾಗಿ ಸಂಘದ ಅಧ್ಯಕ್ಷ ಡಾ.ಎಸ್.ಹರೀಶ್, ಗೌರವಾಧ್ಯಕ್ಷ ಡಾ.ಆರ್.ಕೃಷ್ಣಮೂರ್ತಿ ಮತ್ತು ಪ್ರಧಾನ ಕಾರ್ಯದರ್ಶಿ ಎಂ.ಆನಂದ್ ತಿಳಿಸಿದ್ದಾರೆ.      

  ಮಾರಸಂದ್ರ ಪಿ.ಕೆ.ಬಿ. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಅನುದಾನಿತ ಕಾಲೇಜುಗಳ ನೌಕರರ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯತ್‌ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹೋರಾಟಕ್ಕೆ ಮುಂದಾಗಿದ್ದಾರೆ.  ಹೋರಾಟವನ್ನು ತೀವ್ರಗೊಳಿಸಲು ಮಾರ್ಚ್ 20 ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನವನ್ನು ‌ಬಹಿಷ್ಕಾರ ಮಾಡಲಾಗುತ್ತಿದೆ .

   ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಉಪನ್ಯಾಸಕರ ಅನುಪಾತವನ್ನು ಕಡಿಮೆ ಮಾಡುವುದು. ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಶಿಕ್ಷಣ ಸಚಿವರು, ಶಿಕ್ಷಣ  ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಈ ಎಲ್ಲಾ ವಿಷಯಗಳಿಗೂ ಸಚಿವರು ಮತ್ತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಇನ್ನು ಆದೇಶ ಮಾತ್ರ ಮಾಡಿರುವುದಿಲ್ಲ.  ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಹೋರಾಟಕ್ಕೆ ಬೆಂಬಲ ನೀಡುತ್ತಾ, ಮಾರ್ಚ್ 20 ರಿಂದ ನಡೆಯುವ ದ್ವಿತೀಯ ಪಿಯುಸಿ ಮೌಲ್ಯಮಾಪನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ