Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಪತ್ನಿ ವಿರುದ್ಧ ಇಡಿ ಸಲ್ಲಿಸಿರುವ ಮೇಲ್ಮನವಿ ವಜಾ ಮಾಡಿದ ಸುಪ್ರೀಂ ಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ ಎಂದು ಹೇಳಿದರು.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್  ಮುಖ್ಯನ್ಯಾಯಮೂರ್ತಿ ಗವಾಯಿ ಅವರು ಹೇಳಿದ್ದಾರೆ. ‘’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು‘’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

 ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ.

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ