Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಸಂಘದಿಂದ ಸುವರ್ಣ ಸೌಧ ಮುತ್ತಿಗೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರೈತರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುವರ್ಣ ಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಚಳಿಗಾಲದ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸದ ರಾಜ್ಯ ಸರ್ಕಾರದ ವಿರುದ್ಧ ಡಿಸೆಂಬರ್ 13 ರಂದು ರಾಜ್ಯದ ಹಲವು ಭಾಗದ ರೈತರು ಸುವರ್ಣಸೌಧ ಕ್ಕೆ ಮುತ್ತಿಗೆ ಹಾಕುವ ಮೂಲಕ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ವಕ್ಫ್ ಬೋರ್ಡ್, ಬಗರ್ ಹುಕುಂ, ಸರ್ಕಾರಿ ದಾಖಲಾತಿಗಳನ್ನು ಪಡೆಯುವಲ್ಲಿ ರೈತರ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವ ನಿಟ್ಟಿನಲ್ಲಿ ಈ ಪ್ರತಿಭಟನೆಗೆ ಮುಂದಾಗಿದ್ದು ಈ ಪ್ರತಿಭಟನೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಗಳಿಂದ ರೈತರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ತಾಲ್ಲೂಕು ಅಧ್ಯಕ್ಷ ಹನುಮೇಗೌಡ ಮಾತನಾಡಿ ಈ ಹಿಂದೆ 15 ತಿಂಗಳ ರೈತರ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದು ಕಾಯಿದೆಗಳನ್ನು ಹಿಂಪಡೆದಿದೆ ಅದರೆ ರಾಜ್ಯ ಸರ್ಕಾರ ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಕಾಯಿದೆ ಹಿಂಪಡೆದಿಲ್ಲ,

ಬೆಳಗಾವಿ ಅಧಿವೇಶನದಲ್ಲಿ ಭೂ ಸುಧಾರಣೆ ಕಾಯಿದೆ ಯನ್ನು ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ ರಾಜ್ಯ ಸರ್ಕಾರ ಮರೆತಿದೆ ಈ ಕುರಿತು ನಮ್ಮ ಹೋರಾಟ ಬೆಳಗಾವಿಯಲ್ಲಿ ನೆಡೆಯಲಿದೆ ಎಂದರು. ಅಭಿವೃದ್ದಿ ಹೆಸರಿನಲ್ಲಿ ಫಲವತ್ತಾದ ನೂರಾರು ಎಕರೆ ಭೂ ಸ್ವಾಧೀನ ಪಡಿಸಿ ಕೊಳ್ಳಲಾಗುತ್ತಿದೆ, ರೈತರ ಬೆಂಬಲವಾಗಿ ನಿಲ್ಲಬೇಕಿದ್ದ ಸರ್ಕಾರ ರೈತರ ಜೀವನಕ್ಕೆ ಮುಳುವಾಗುತ್ತಿರುವುದು ಸರಿಯಲ್ಲ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ನಾಗರಾಜು, ಟಿ ಜಿ ವಾಸುದೇವ್, ಸತೀಶ್, ಕೆ ಟಿ ಮಹದೇವ್ , ಆರ್. ಸತೀಶ್, ಮುನಿ ನಾರಾಯಣಪ್ಪ, ಕೇಶವ್ ಮೂರ್ತಿ, ಧನಂಜಯ, ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ