E-PAPER
17 Nov 2026, 05:52:33 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಧಾನ ಪರಿಷತ್‌ನ ನಾಲ್ವರು ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಂದ ಇತ್ತೀಚೆಗೆ ಆಯ್ಕೆಯಾದ ನಾಲ್ವರು ನೂತನ ಸದಸ್ಯರು ಇಂದು ವಿಧ್ಯುಕ್ತವಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಭಾಪತಿ ಸಲೀಂ ಅಹಮ್ಮದ್ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದ ಎ.ಪಿ. ರಂಗನಾಥ್ (ಜೆಡಿಎಸ್), ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶೀಲ್ ಜಿ. ನಮೋಶಿ (ಬಿಜೆಪಿ), ಪಶ್ಚಿಮ ಪದವೀಧರರ ಕ್ಷೇತ್ರದ ಎಸ್.ವಿ. ಸಂಕನೂರ (ಬಿಜೆಪಿ) ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದ ಕೆ.ಎಂ. ಸುರೇಶ್ (ಬಿಜೆಪಿ) ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅಕ್ಟೋಬರ್ 2026ರಲ್ಲಿ ನಡೆದ ಚುನಾವಣೆಯಲ್ಲಿ ಇವರು ಜಯಗಳಿಸಿದ್ದರು.

ಸಮಾರಂಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, "ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳ ಪರಿಹಾರ ಮತ್ತು ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿಯಾಗಿ ಶ್ರಮಿಸಲಿ," ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ, ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಆರ್. ಅಶೋಕ್, ಪರಿಷತ್ ಸದಸ್ಯರಾದ ಟಿ.ಎ. ಶರವಣ, ಎನ್. ರವಿಕುಮಾರ್, ಕಾರ್ಯದರ್ಶಿ ಜ್ಯೋತಿ ಹಾಗೂ ನೂತನ ಸದಸ್ಯರ ಕುಟುಂಬಸ್ಥರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದವಲ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಹೂ ಕೋಸು ನಾರು ಪೂರೈಕೆ:ಬೆಳೆ ನಾಶವಾಗಿ ಕಂಗಾಲಾದ ರೈತಬಸವಣ್ಣನವರ ಮೇಲೆ ಕಳಂಕದ ಮಾತು ಸಲ್ಲದು; ಅವರ ವಚನಗಳೇ ಆರೋಪಗಳಿಗೆ ಕನ್ನಡಿ!ಬಿಲ್ಕಿಸ್ ಬಾನೋ ಪ್ರಕರಣ: 17 ವರ್ಷ ಜೈಲುವಾಸ ಪೂರೈಸಿದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು'ಪ್ರೆಸ್' ಸ್ಟಿಕ್ಕರ್ ಬಳಸಿ ಶವ ಸಾಗಾಟ: ರಾಜಾಜಿನಗರ ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿ ಕರಾಳ ಮುಖ ಬಯಲು!ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಬೇಡ: ಯುರೋಪ್ ರಾಜಕಾರಣಿ ಹೇಳಿಕೆಗೆ ಇಟಲಿ ಸಂಸದೆ ಡೆಬೊರಾ ಬೆರ್ಗಾಮಿನಿ ತಿರುಗೇಟುಯುಪಿ ಚುನಾವಣೆಗೆ ಕಾಂಗ್ರೆಸ್ ರಣತಂತ್ರ: 181 ಸೀಟುಗಳ ಪಟ್ಟಿ ಸಲ್ಲಿಕೆ, ಎಸ್‌ಪಿ ಜೊತೆ ಮಹತ್ವದ ಸಭೆವಿಧಾನ ಪರಿಷತ್‌ನ ನಾಲ್ವರು ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರನಿಗಮ-ಮಂಡಳಿ ನೇಮಕಾತಿ: ಕಾಂಗ್ರೆಸ್‌ನಲ್ಲಿ ಭಿನ್ನಮತ, ಆರ್‌ಎಸ್‌ಎಸ್ ಕಾರ್ಯಕರ್ತರ ಸೇರ್ಪಡೆಗೆ ತೀವ್ರ ಆಕ್ಷೇಪಹಿರಿಯೂರು ಉಪಚುನಾವಣೆ-ಎನ್‌ಡಿಎ ಮೈತ್ರಿಯಲ್ಲಿ ಟಿಕೆಟ್ ಕಗ್ಗಂಟು!ಹಿರಿಯೂರು ಉಪಚುನಾವಣೆ: ಬಿಜೆಪಿಯ ದೆಹಲಿ ಅಂಗಳಕ್ಕೆ ಮೂವರ ಹೆಸರು ರವಾನೆ?