Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಹ ಮತದಾರರು ಬಿಟ್ಟುಹೋಗದಂತೆ ಕ್ರಮವಹಿಸಿ- ಆಮ್ಲಾನ್ ಆದಿತ್ಯ ಬಿಸ್ವಾಸ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮತದಾರರ ಪಟ್ಟಿಗಳ ವೀಕ್ಷಕರು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮತದಾರರ ಗಣತಿ ನಮೂನೆಗಳನ್ನು ವಿತರಿಸಿರುವ ಕುರಿತು ಸಮಗ್ರವಾಗಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಹಾಗೂ ಮುಖ್ಯ ಯೋಜನಾಧಿಕಾರಿ ಸಿ. ಎಸ್. ಗಾಯತ್ರಿ ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.