Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಪ್ರಕ್ರಿಯೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿದೆ.      


ಆ.16ರಂದು ಬೆಳಿಗ್ಗೆ 9ಕ್ಕೆ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಹಿರಿಯೂರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.17ರಂದು ಬೆಳಿಗ್ಗೆ 9ಕ್ಕೆ ಹೊಳಲ್ಕೆರೆಯ ರಾಮಗಿರಿ ಎಸ್‍ಜೆಎಂ ಪ್ರೌಢಶಾಲೆಯಲ್ಲಿ ಹೊಳಲ್ಕೆರೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ,

ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಚಳ್ಳಕೆರೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.23ರಂದು ಬೆಳಿಗ್ಗೆ 9ಕ್ಕೆ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದಲ್ಲಿ ಹೊಸದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.24ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಒಬವ್ವ ಕ್ರೀಡಾಂಗಣದಲ್ಲಿ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ,

ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣ ಹಾಗೂ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಮೊಳಕಾಲ್ಮುರು ತಾಲ್ಲೂಕು ಮಟ್ಟದ ದಸರಾ  ಕ್ರೀಡಾಕೂಟ ನಡೆಯಲಿದೆ.  ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗಾಸನ ಕ್ರೀಡೆಗಳು ನಡೆಯಲಿವೆ.


ಪುರುಷರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 4*100 ಮೀ. ರಿಲೇ, 4*400 ಮೀ. ರಿಲೇ ಕ್ರೀಡೆಗಳು ಇರಲಿವೆ.


ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 4*100 ಮೀ ರಿಲೇ, 4*100 ಮೀ.ರಿಲೇ ಕ್ರೀಡೆಗಳು ಇರಲಿವೆ.


ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂರವಾಣಿ ಸಂಖ್ಯೆ 08194-235635 ಹಾಗೂ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರ ದೂರವಾಣಿ ಸಂಖ್ಯೆ 9611673475 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ