Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿಗೆ ಆಗ್ರಹಿಸಿ ತಮಟೆ ಚಳುವಳಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾದ ವತಿಯಿಂದ ನಗರದಲ್ಲಿ ಶುಕ್ರವಾರ ತಮಟೆ ಚಳುವಳಿ ನಡೆಸಲಾಯಿತು.

ನಗರದ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದ ವರೆಗೆ ಆಗಮಿಸಿದ ಪ್ರತಿಭಟನಕಾರರು ದಾರಿ ಉದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು‌ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಹನುಂತಪ್ಪ ದರ್ಗಾ, ಚಿತ್ರದುರ್ಗದಲ್ಲಿ ಹೊಲಸೆ ಬಂದ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು, ಸಮುದಾಯದ ಬಗ್ಗೆ ಯಾವುದೇ ಆಸಕ್ತಿ ಇಲ್ಲ.

ಜಿಲ್ಲೆಯಲ್ಲಿ ಏನೇ ದೌರ್ಜನ್ಯ ನಡೆದರೂ ಕೂಡ ಅಲ್ಲಿಗೆ ಹೋಗಿ ನೊಂದವರಿಗೆ ಸಾಂತ್ವನ ಹೇಳುವುದು ಜಿಲ್ಲೆಯ ಮಾದಿಗ ಸಮುದಾಯ ಆಗಿದೆ. ಮಾಜಿ ಸಂಸದರು‌ ಕರೆದಿರುವ ಹೋರಾಟಕ್ಕೆ ಜಿಲ್ಲೆಯ ಯಾವ ಮಾದಿಗ ಸಂಘಟನೆಗಳನ್ನು ಕರೆದಿಲ್ಲ. ತಮಗೆ ಬೇಕಾದಂತಹ ನಾಲ್ಕು ಜನ ಹಿಂಬಾಲಕರನ್ನು ಹಿಡಿದುಕೊಂಡು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಸಮುದಾಯಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ತೆಗಳಿದರು.


ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಎರಡು ಇಲ್ಲವಾಗಿದೆ. ಒಳ ಮೀಸಲಾತಿಗಾಗಿ ಕಳೆದ ಮೂರು ದಶಕಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗಿದೆ. ನ್ಯಾಯಾಲಯ ನೀಡಿದ ಸೂಚನೆ ಅನ್ವಯ ಒಳ ಮೀಸಲಾತಿ ನೀಡಲು ವಿಳಂಬ ಆಗುತ್ತಿದೆ. ಇದನ್ನು ವಿರೋಧಿಸಿ ಹೋರಾಟ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರ ಶೀಘ್ರವಾಗಿ ಒಳ‌ ಮೀಸಲಾತಿಯನ್ನು ಜಾರಿ ಮಾಡದಿದ್ದರೆ ಮುಂದಿನ‌ ದಿನಗಳಲ್ಲಿ ಮಾದಿಗ ಮಹಾಸಭಾದಿಂದ ಹೋರಾಟ ತೀವ್ರಗೊಳಿಸಿ‌ ಮೀಸಲಾತಿ ಪಡೆಯುವವರೆಗೂ ವಿರಮಿಸುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶ್ರೀನಿವಾಸ್ ಬಾಳೆಕಾಯಿ, ಶೋಷಿತ ಸಮಾಜದ ರಾಜ್ಯಾಧ್ಯಕ್ಷ ರಾಜಪ್ಪ, ಕಣಿವೆ‌ಮಾರಮ್ಮ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ರಾಜು, ವಿಶ್ವ ನಾರಾಯಾಣ ಮೂರ್ತಿ, ಜಗದೀಶ, ರಾಜಪ್ಪ, ಹನುಮಂತಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ