Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ‘ರೂಪಾಯಿ ಚಿಹ್ನೆ’ ಪಕ್ಕಕ್ಕೆ ಸರಿಸಿದ ತಮಿಳುನಾಡು ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ
ರೂಪಾಯಿ ಚಿಹ್ನೆಯನ್ನು ಪಕ್ಕಕ್ಕೆ ಸರಿಸಿರುವ ತಮಿಳುನಾಡು ಸರ್ಕಾರದ ವರ್ತನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಟೀಕಿಸಿದೆ.
ರೂಪಾಯಿ ಚಿಹ್ನೆಯನ್ನು ಧಿಕ್ಕರಿಸುವ ಮೂಲಕ ದೇಶದ ಐಕ್ಯತೆಯಲ್ಲಿ ಬಿರುಕು ಮೂಡಿಸುವ ಪ್ರತ್ಯೇಕತಾ ಮನೋಭಾವವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ಆರೋಪಿಸಿದೆ.


ದಕ್ಷಿಣ ಭಾರತದಲ್ಲಿ ತಮಿಳುನಾಡಿನ ಭಾಷೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಿಂದಿನ ಯುಪಿಎ ಸೇರಿದಂತೆ ಕಾಂಗ್ರೆಸ್ ಸರ್ಕಾರಗಳು ತೋರಿದ ಧೋರಣೆಗಳಿಗೆ ಭಿನ್ನವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರ್ಕಾರ ಅತೀವ ಕಾಳಜಿ ಹಾಗೂ ಬದ್ಧತೆ ತೋರುತ್ತಿದೆ. ಆದರೆ ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮಿಳುನಾಡಿನ ಜನರ ಭಾವನೆಯಲ್ಲಿ ಭಾಷೆ ಹಾಗೂ ಪ್ರಾಂತೀಯತೆ ಹೆಸರಿನಲ್ಲಿ ದ್ವೇಷ ಬಿತ್ತಲು ಹೊರಟಿರುವುದು ರಾಷ್ಟ್ರದ ಹಿತಾಸಕ್ತಿಗೆ ಮಾರಕ ಉಂಟುಮಾಡುವ ನಡೆಯಾಗಿದೆ ಎಂದು ಬಿಜೆಪಿ ಖಂಡಿಸಿದೆ.

ಇಂತಹ ನಡವಳಿಕೆಗಳು ತಮಿಳುನಾಡಿನ ಜನತೆಯೂ ಸಹ ಒಪ್ಪಲು ಸಾಧ್ಯವಿಲ್ಲ, ಅಭಿವೃದ್ಧಿ ಇಲ್ಲದ ಆಡಳಿತದಿಂದ ಕಂಗೆಟ್ಟಿರುವ ಡಿಎಂಕೆ ಸರ್ಕಾರ ಭಾಷೆ ಹಾಗೂ ಪ್ರಾಂತೀಯತೆಯ ಹೆಸರಿನಲ್ಲಿ ಜನತೆಯ ಧಿಕ್ಕು ತಪ್ಪಿಸುವ ಮಾರ್ಗವನ್ನು ಅನುಸರಿಸುತ್ತಿದೆ. ಇದಕ್ಕೆ ತಮಿಳುನಾಡಿನ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಈ ರೀತಿಯ ವರ್ತನೆಗಳನ್ನು ಈ ದೇಶದ ಯಾವುದೇ ಭಾಗದಲ್ಲಿ ನಡೆದರೂ ಅದನ್ನು ಯಾರೂ ಒಪ್ಪಲಾರರು ಎಂದು ಬಿಜೆಪಿ ಎಚ್ಚರಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಯುಪಿಎ ಆಡಳಿತಾವಧಿಯಲ್ಲಿಯೇ ಅಸ್ತಿತ್ವ ಕಂಡುಕೊಂಡ ಚಿಹ್ನೆಯನ್ನು ಅಪಮಾನಿಸುತ್ತಿರುವ ತನ್ನ ಮಿತ್ರ ಪಕ್ಷದ ರಾಷ್ಟ್ರ ಹಿತಾಸಕ್ತಿಯ ವಿರೋಧದ ನಡೆಯನ್ನು ಕಾಂಗ್ರೆಸ್ ಖಂಡಿಸದೇ ಮೌನ ವಹಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದ ಐಕ್ಯತೆಗಿಂತಲೂ ಅಧಿಕಾರ ರಾಜಕಾರಣವೇ ತನ್ನ ಆದ್ಯತೆ ಎಂಬುದನ್ನು ಅದು  ತೋರಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ