Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆರಿಗೆ ಹಂಚಿಕೆ ಅನುದಾನದ ಲೋಪದೋಷ ಸರಿಪಡಿಸಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ಮುಖ್ಯಮಂತ್ರಿಗಳು ವಿವರಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ