Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತ ಸಿಬ್ಬಂದಿಯನ್ನು ಬೀಳ್ಕೊಟ್ಟು ತಾನೇ ಮನೆಗೆ ಡ್ರಾಪ್ ಮಾಡಿದ ತಹಶೀಲ್ದಾರ್

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :

ಸರ್ಕಾರಿ ನೌಕರಿಯಲ್ಲಿ ವಯೋ ನಿವೃತ್ತಿಯಾದವರಿಗೆ ಸನ್ಮಾನ ಮಾಡಿ ಮನೆಗೆ ಕಳುಹಿಸುವುದು ಸಾಮಾನ್ಯ. ಆದರೆ, ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆ ಅವರನ್ನು ತಮ್ಮ ವಾಹನದಲ್ಲಿ ಅವರ ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. 

 ಹೊಸನಗರ ತಾಲೂಕು ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಸದಾಶಿವಪ್ಪ ಎಸ್ ವಿ ಶನಿವಾರ (ಆ.೩೧) ವಯೋನಿವೃತ್ತಿ ಹೊಂದಿದರು. ಅವರು ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಕೆಲಸ ಮಾಡಿದ್ದರು. ಹೊಸನಗರ ಕಂದಾಯ ಇಲಾಖೆಯ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. 

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ನಂತರ ತಹಶೀಲ್ದಾರ್ ಅವರು ತಾವು ತಾಲೂಕು ಆಡಳಿತಾಧಿಕಾರಿ ಆಗಿದ್ದರೂ ತಮ್ಮ ವಾಹನದಲ್ಲಿ ಸದಾಶಿವಪ್ಪರನ್ನು ಕೂಡ್ರಿಸಿಕೊಂಡು ಅವರ ಮನೆಗೆ ತಾವೇ ಡ್ರೈವ್ ಮಾಡಿಕೊಂಡು ಹೋಗಿ ಬಿಟ್ಟು ಬರುವ ಮೂಲಕ ಮಾದರಿ ಅಧಿಕಾರಿಯಾಗಿದ್ದಾರೆ.

ತಹಶೀಲ್ದಾರ್ ಅವರ ಈ ಕಾರ್ಯಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿದೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ