Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವಸ್ಥಾನ, ಮಠ ಮಾನ್ಯಗಳು ಶಾಲೆಗಳಾಗಿ ಮಾರ್ಪಡಬೇಕಿದೆ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ದೇವಸ್ಥಾನ
, ಮಠ ಮಾನ್ಯಗಳು ಪ್ರಸ್ತುತ ದಿನಗಳಲ್ಲಿ ಶಾಲೆಗಳಾಗಿ ಮಾರ್ಪಡಬೇಕಿದೆ ಎಂದು ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಹೇಳಿದರು.

ವದ್ದೀಗೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ದೇವಸ್ಥಾನ, ಮಠಗಳಿಗಿಂತ ಹೆಚ್ಚಾಗಿ ಶಾಲೆಗಳು ತೆರೆದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ವದ್ದಿಕೆರೆ ಸಿದ್ದೇಶ್ವರಸ್ವಾಮಿ ದೇವಸ್ಥಾನ ಇಡಿ ರಾಜ್ಯದಲ್ಲಿಯೇ ಪ್ರಸಿದ್ದ ಕ್ಷೇತ್ರವಾಗಿದೆ. ಹೊರ ರಾಜ್ಯಗಳಿಂದಲೂ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಗ್ರಾಮಸ್ಥರು ಸಹಕರಿಸಿದರೆ ಇಲ್ಲಿ ನೂತನವಾಗಿ ಶಾಲೆಯನ್ನು ಪ್ರಾರಂಭಿಸಬಹುದು ಎಂದು ತಿಳಿಸಿದರು.

ಹೊಸ ವರ್ಷದ ಅಂಗವಾಗಿ ಎಂ.ಗಿರಿ ಸುವರ್ಣಮ್ಮ, ಓಂಕಾರಮೂರ್ತಿ ಇವರುಗಳು ಸರ್ಕಾರಿ ಶಾಲೆಗೆ ಬಿಳಿ ಮತ್ತು ಹಸಿರು ಬೋರ್ಡ್‌ಗಳು, ಪ್ಲೇವುಡ್, ಕ್ರೀಡಾ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಸರ್ಕಾರಿ ಶಾಲೆಯ ಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾಗಿರುವುದರಿಂದ ಪ್ರತಿ ವರ್ಷ ಇಬ್ಬರು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತೇವೆ. ವಿದ್ಯೆಗಿಂತ ದೊಡ್ಡ ಸಂಪತ್ತು ಯಾವುದು ಇಲ್ಲ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವದ್ದೀಕೆರೆ ಕಾಂತರಾಜ್ ಮಾತನಾಡಿ ಇಲ್ಲಿ ದೇವಸ್ಥಾನ ಜಾಗ ಮತ್ತು ಸರ್ಕಾರಿ ಜಮೀನಿದ್ದು, ಮಕ್ಕಳ ಶಿಕ್ಷಣಕ್ಕೆ ಉಪಯೋಗವಾಗುವಂತ ಸ್ಥಳ ಗುರುತಿಸಿದರೆ ನೂತನ ಶಾಲಾ ನಿರ್ಮಾಣ ಮಾಡಲಾಗುವುದೆಂದರು.

ಯುವ ನ್ಯಾಯವಾದಿ ಪ್ರತಾಪ್‌ಜೋಗಿ ಮಾತನಾಡುತ್ತ ಪ್ರಸ್ತುತ ದಿನಗಳಲ್ಲಿ ವದ್ದಿಕೆರೆಯ ಯುವಕರು, ಹಿರಿಯರು, ಎಸ್.ಡಿ.ಎಂ.ಸಿ. ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಸಿದ್ದೇಶ್ವರಸ್ವಾಮಿ ದೇವಸ್ಥಾನ ಸಮಿತಿಯವರು ಒಂದಾಗಿ ನೂತನ ಶಾಲಾ ಕಟ್ಟಡ ನಿರ್ಮಾಣ ಮಾಡಲು ಸಮ್ಮತಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಕರಿಬಸಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸಿದ್ದೇಶ್, ಸಿದ್ದಪ್ಪ, ನಿರಂಜನ್, ಸಿದ್ದೇಶ್ವರಸ್ವಾಮಿ ದೇವಸ್ಥಾನ ಸಮಿತಿಯ ಮಹೇಶ್, ರವೀಂದ್ರನಾಥ್, ಚಂದ್ರಣ್ಣ, ಸಿದ್ದಪ್ಪ, ಚಂದ್ರಪ್ಪ, ಅಶೋಕ್, ಗ್ರಾಮದ ಮುಖಂಡರುಗಳಾದ ಸಿದ್ದು, ಗಿರೀಶ್, ಸಿದ್ದಲಿಂಗ, ಗೋಪಿನಾಥ್, ಸಿದ್ದಾರ್ಥ, ಚೇತನ್, ಲಕ್ಷ್ಮಿದೇವಿ, ಮಂಜುಳ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ವೇದಿಕೆಯಲ್ಲಿದ್ದರು. ಅಶ್ವಿನಿ ವಂದಿಸಿದರು. ತಿಮ್ಮಣ್ಣ ನಿರೂಪಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ